ಹೊಸದಿಗಂತ ಡಿಜಿಟಲ್ ಡೆಸ್ಕ್:
ಹುಲಿ ಉಗುರು ಪೆಂಡೆಂಟ್ ಧರಿಸಿದ ಆರೋಪದಡಿ ಅರಣ್ಯಾಧಿಕಾರಿಗಳಿಂದ ಬಂಧಿತನಾಗಿದ್ದ ಕನ್ನಡ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಇಂದು ವಿಚಾರಣೆ ನಡೆಸಿದ ಎರಡನೇ ಎಸಿಜೆಎಂ ನ್ಯಾಯಾಲಯವು ನಾಳೆಗೆ ಆದೇಶವನ್ನು ಕಾಯ್ದಿರಿಸಿದೆ.
ಸಂತೋಷ್ ಪರ ವಕೀಲ ನಟರಾಜ್ ಹಾಗೂ ಸರ್ಕಾರಿ ಅಭಿಯೋಜಕರು ನ್ಯಾಯಾಲಯದ ಮುಂದೆ ವಿಚಾರಣೆ ಮಂಡಿಸಿದರು.
ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು ಜಾಮೀನು ಅರ್ಜಿಯ ಆದೇಶವನ್ನು ನಾಳೆಗೆ ಕಾಯ್ದಿರಿಸಿದರು. ಹುಲಿ ಉಗುರು ಪೆಂಡೆಂಟ್ ಹೊಂದಿರುವ ದೂರು ಬಂದ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳು ಬಿಗ್ ಬಾಸ್ ರಿಯಾಲಿಟಿ ಶೋ ನಡೆಯುವಾಗಲೇ ಸಂತೋಷ್ನನ್ನು ಬಂಧಿಸಿದ್ದರು. ಈ ವೇಳೆ ಸಂತೋಷ್ ಧರಿಸಿದ ಹುಲಿ ಉಗುರನ್ನು ವಶಕ್ಕೆ ಪಡೆದುಕೊಂಡಿದ್ದರು.