ನ್ಯಾಯಾಲಯದ ಕಲಾಪಗಳಿಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ

ಹೊಸ ದಿಗಂತ ವರದಿ, ಅಂಕೋಲಾ:

ಅಬಕಾರಿ ಕಾಯ್ದೆಯಡಿ ಬಂಧಿತರಾಗಿ ಕಳೆದ 11 ವರ್ಷಗಳಿಂದ ನ್ಯಾಯಾಲಯದ ಕಲಾಪಗಳಿಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಅಂಕೋಲಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ಕೇರಳ ಕಾಸರಗೋಡು ಚೆನ್ನಗಿರಿ ನಿವಾಸಿ ವಿನೋದಕುಮಾರ ಭಾಸ್ಕರನ್ ಮತ್ತು ಚೆಮನಾಡ ನಿವಾಸಿ ಅಬ್ದುಲ್ ಮಹಮ್ಮದ್ ಕುಂಞ ಬಂದಿತ ಆರೋಪಿಯಾಗಿದ್ದು , ಇವರು ಕಳೆದ 11 ವರ್ಷಗಳಿಂದ ಅಂಕೋಲಾ ನ್ಯಾಯಾಲಯದ ಕಲಾಪಗಳಿಗೆ ಹಾಜರಾಗದೇ ತಲೆಮರೆಸಿಕೊಂಡಿದ್ದರು.
ಅಂಕೋಲಾ ಪೊಲೀಸ್ ನಿರೀಕ್ಷಕ ಸಂತೋಷ ಶೆಟ್ಟಿ ನೇತೃತ್ವದಲ್ಲಿ ಪಿ.ಎಸ್.ಐ ಪ್ರವಿಣಕುಮಾರ್, ಸಿಬ್ಬಂದಿಗಳಾದ ಮಂಜುನಾಥ ಲಕ್ಮಾಪುರ, ಶ್ರೀಕಾಂತ ಕಟಬರ ಅವರ ತಂಡ ಕೇರಳಕ್ಕೆ ತೆರಳಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿ ಕರೆತಂದಿದ್ದಾರೆ.
ಅಂಕೋಲಾ ಪೊಲೀಸರ ಕಾರ್ಯಕ್ಕೆ ಜಿಲ್ಲಾ ಪೊಲೀಸ್ ವರಿಷ್ಠೆ ಡಾ ಸುಮನ್ ಪನ್ನೇಕರ್ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಬದರಿನಾಥ್, ಡಿ.ವೈ.ಎಸ್. ಪಿ ವೆಲೆಂಟನ್ ಡಿಸೋಜ ಅಭಿನಂದಿಸಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!