Friday, December 8, 2023

Latest Posts

ಸಂತ್ರಸ್ತೆಯನ್ನು ವಿವಾಹವಾಗಲು ಒಪ್ಪಿದ ಆರೋಪಿ: ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಅತ್ಯಾಚಾರದ ಸಂತ್ರಸ್ತೆ ಹಾಗೂ ಆರೋಪಿ ಪರಸ್ಪರ ವಿವಾಹವಾಗಲು ಒಪ್ಪಿಗೆ ನೀಡಿದ ಹಿನ್ನೆಲೆಯಲ್ಲಿ ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.

ಕೋರ್ಟ್ ಇಬ್ಬರ ವಿವಾಹಕ್ಕೂ ಒಂದು ತಿಂಗಳ ಗಡುವನ್ನು ಕೋರ್ಟ್ ವಿಧಿಸಿದ್ದು ಆರೋಪಿಯನ್ನು ನ್ಯಾಯಾಂಗ ಬಂಧನದಿಂದ ಮುಕ್ತಗೊಳಿಸಲು ಸೂಚನೆ ನೀಡಿದೆ.

ಮಹತ್ವದ ಬೆಳವಣಿಗೆಯೊಂದರಲ್ಲಿ ಸಂತ್ರಸ್ತೆಯೊಂದಿಗೆ ವಿವಾಹವಾಗುವ ಷರತ್ತಿನೊಂದಿಗೆ ಅತ್ಯಾಚಾರ, ಪೋಕ್ಸೋ ಕೇಸ್ ನ್ನು ಹೈಕೋರ್ಟ್ ರದ್ದು ಪಡಿಸಿದ ಘಟನೆ ನಡೆದಿದೆ.

ಅತ್ಯಾಚಾರ, ಪೋಕ್ಸೋ ಪ್ರಕರಣದ ಸಂತ್ರಸ್ತ ಯುವತಿ, ಹೈಕೋರ್ಟ್ ಗೆ ಸಲ್ಲಿಸಿದ ಪ್ರಮಾಣ ಪತ್ರದಲ್ಲಿ ಆರೋಪಿಯೊಂದಿಗೆ ವಿವಾಹವಾಗುವುದಾಗಿ ಹೇಳಿಕೆ ನೀಡಿದ್ದು, ಜೈಲಿನಲ್ಲಿರುವ ಆರೋಪಿಯೂ ತನ್ನನ್ನು ವಿವಾಹವಾಗಲು ಒಪ್ಪಿದ್ದಾಗಿ ತಿಳಿಸಿದ್ದಳು.ಈ ಹಿನ್ನೆಲೆಯಲ್ಲಿ ಷರತ್ತಿನೊಂದಿಗೆ ಹೈಕೋರ್ಟ್ ಆರೋಪಿ ವಿರುದ್ಧದ ಅತ್ಯಾಚಾರ, ಪೋಕ್ಸೋ ಕೇಸ್ ನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.

ಇನ್ನು ಜೈಲಿನಿಂದ ಕೋರ್ಟ್ ಗೆ ಹಾಜರು ಪಡಿಸಿದ್ದ ಆರೋಪಿಯೂ ಸಂತ್ರಸ್ತೆಯನ್ನು ವಿವಾಹವಾಗಲು ಒಪ್ಪಿದ್ದಾನೆ. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ನ್ಯಾ.ಹೇಮಂತ್ ಚಂದನಗೌಡರ್ ಅವರಿದ್ದ ಪೀಠ ಅತ್ಯಾಚಾರ, ಪೋಕ್ಸೋ ಕೇಸ್ ರದ್ದುಗೊಳಿಸಿ, ಒಂದು ತಿಂಗಳೊಳಗಾಗಿ ವಿವಾಹವಾಗುವಂತೆ ಷರತ್ತು ವಿಧಿಸಿ ಮಹತ್ವದ ಆದೇಶ ನೀಡಿದೆ.

ಈ ಮೂಲಕ ಚಿಂತಾಮಣಿ ಟೌನ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ, ಪೋಕ್ಸೋ ಕೇಸ್ ನ್ನು ರದ್ದುಪಡಿಸಿ ಹೈಕೋರ್ಟ್ ಆದೇಶ ನೀಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!