ಹೊಸದಿಗಂತ ವರದಿ ವಿಜಯಪುರ:
ಅಕ್ರಮ ಕಂಟ್ರಿ ಪಿಸ್ತೂಲ್ ಹೊಂದಿದ್ದ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿರುವ ಘಟನೆ ಜಿಲ್ಲೆಯ ಇಂಡಿ ಪಟ್ಟಣದ ರೈಲ್ವೆ ನಿಲ್ದಾಣ ಬಳಿ ನಡೆದಿದೆ. ಬಂಧಿತನಿಂದ ಕಂಟ್ರಿ ಪಿಸ್ತೂಲ್, ಜೀವಂತ ಗುಂಡು ಜಪ್ತಿ ಮಾಡಿದ್ದಾರೆ.
ಲಚ್ಯಾಣ ಗ್ರಾಮದ ಅನಿಲ ಮಲ್ಲಪ್ಪ ಬಂಡಾರಿ ಬಂಧಿತ ಆರೋಪಿ.
ಈ ಆರೋಪಿ ಕಂಟ್ರಿ ಪಿಸ್ತೂಲ್ ಹಿಡಿದು ಇಂಡಿ ಪಟ್ಟಣದ ರೈಲ್ವೆ ನಿಲ್ದಾಣದಿಂದ ಅಹಿರಸಂಗ ಕಡೆಗೆ ಹೋಗುತ್ತಿದ್ದ ವೇಳೆ ಅರೆಸ್ಟ್ ಮಾಡಿದ್ದಾರೆ. ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆಗಿಳಿದ ಪಿಎಸ್ಐ ಸೋಮೇಶ ಗೆಜ್ಜಿ ನೇತೃತ್ವದಲ್ಲಿ ದಾಳಿ ನಡೆಸಿ ಒಂದು ಕಂಟ್ರಿ ಪಿಸ್ತೂಲ್, ಎರಡು ಜೀವಂತ ಗುಂಡು ವಶಕ್ಕೆ ಪಡೆದಿದ್ದಾರೆ.
ಈ ಸಂಬಂಧ ಇಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.