ಪತ್ರಿಕೋದ್ಯಮದಲ್ಲಿ ಸಾಧನೆ: ಹೊಸದಿಗಂತದ ಮೂವರಿಗೆ ಅಕಾಡೆಮಿ ಪ್ರಶಸ್ತಿ ಪ್ರದಾನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕ ಮಾಧ್ಯಮ ಅಕಾಡೆಮಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಲಾದ ಸಮಾರಂಭದಲ್ಲಿ ಹೊಸದಿಗಂತ ಪತ್ರಿಕೆಯ ಸಮೂಹ ಸಂಪಾದಕ ವಿನಾಯಕ ಭಟ್ ಮೂರೂರು, ಹೊಸದಿಗಂತ ಮಂಗಳೂರು ಆವೃತ್ತಿಯ ಹಿರಿಯ ವರದಿಗಾರ ಆನಂದ ಶೆಟ್ಟಿ, ವಿಶೇಷ ವರದಿಗಾರ ಗುರುವಪ್ಪ ಬಾಳೇಪುಣಿ ಅವರುಗಳ ಸಹಿತ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ 153 ಮಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಾಧ್ಯಮ ಅಕಾಡೆಮಿ ಪ್ರಶಸ್ತಿ, ಟಿಯೆಸ್ಸಾರ್ ಸ್ಮಾರಕ, ಮೊಹರೆ ಹಣಮಂತರಾಯ ಹಾಗೂ ಅಭಿವೃದ್ಧಿ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿ ವಿತರಿಸಿದರು.

ಈ ಸಂದರ್ಭ ಮಾತನಾಡಿದ ಅವರು, ದೇಶದಲ್ಲಿ ಪ್ರಜಾಪ್ರಭುತ್ವ ಉಳಿದಿರುವುದು ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಹಾಗೂ ಪತ್ರಿಕೆಗಳಿಂದ. ವಿಶ್ವದ ನಾಗರಿಕತೆ ಬೆಳವಣಿಗೆಯಲ್ಲಿ ಮಾಧ್ಯಮ ಕ್ಷೇತ್ರ ಪ್ರಮುಖ ಪಾತ್ರ ವಹಿಸುತ್ತದೆ ಎಂದರು.

ಸಮಾರಂಭದಲ್ಲಿ ಕಂದಾಯ ಸಚಿವ ಆರ್. ಅಶೋಕ್, ವಾರ್ತಾ ಇಲಾಖೆ ಹಾಗೂ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಇಲಾಖೆ ಆಯುಕ್ತ ಡಾ. ಪಿ.ಎಸ್. ಹರ್ಷ, ಅಕಾಡೆಮಿ ಅಧ್ಯಕ್ಷ ಸದಾಶಿವ ಶೆಣೈ ಸಹಿತ ವಿವಿಧ ಗಣ್ಯರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!