SHOCKING | ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ: ಬೆಚ್ಚಿಬಿದ್ದ ದಕ್ಷಿಣ ಕನ್ನಡ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಲೇಜು ಆವರಣದಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಅಪರಿಚಿತ ವ್ಯಕ್ತಿಯಿಂದ ಆ್ಯಸಿಡ್ ದಾಳಿಯಾಗಿರುವ ಆಘಾತಕಾರಿ ಘಟನೆ ದಕ್ಷಿಣ ಕನ್ನಡ ಜಿಲ್ಲೆತ ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.

ಘಟನೆಯಲ್ಲಿ ಮೂವರು ವಿದ್ಯಾರ್ಥಿನಿಯರು ಗಂಭೀರವಾಗಿ ಗಾಯಗೊಂಡಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಆರೋಪಿ ಮುಸುಕು ಧರಿಸಿದ್ದು, ಓರ್ವ ಆರೋಪಿಯನ್ನು ವಿದ್ಯಾರ್ಥಿಗಳು ಪೊಲೀಸರಿಗೆ ಒಪ್ಪಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!