ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದ ಪುಣೆಯಲ್ಲಿ 57 ವರ್ಷದ ಸಹಾಯಕ ಪೊಲೀಸ್ ಕಮಿಷನರ್(ಎಸಿಪಿ) ತಮ್ಮ ಪತ್ನಿ ಮತ್ತು ಸೋದರಳಿಯನನ್ನು ಗುಂಡಿಕ್ಕಿ ಕೊಂದು, ಬಳಿಕ ತಾವೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಇಲ್ಲಿನ ಬಾನೇರ್ ಪ್ರದೇಶದ ಎಸಿಪಿ ಭರತ್ ಗಾಯಕ್ವಾಡ್ ಅವರ ಬಂಗಲೆಯಲ್ಲಿ ಇಂದು ಬೆಳಗಿನ ಜಾವ 3.30ರ ಸುಮಾರಿಗೆ ಈ ಘಟನೆ ನಡೆದಿದೆ. ಘಟನೆಯ ಹಿಂದಿನ ಕಾರಣ ಇನ್ನೂ ಪತ್ತೆಯಾಗಿಲ್ಲ ಎಂದು ಚತುರ್ಶೃಂಗಿ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.
ಅಮರಾವತಿಯಲ್ಲಿ ಎಸಿಪಿಯಾಗಿ ಗಾಯಕ್ವಾಡ್ ಅವರನ್ನು ನಿಯೋಜಿಸಲಾಗಿದ್ದು,ಇಂದು ಬೆಳಗಿನ ಜಾವ 3.30ರ ಸುಮಾರಿಗೆ ಎಸಿಪಿ ಗಾಯಕ್ವಾಡ್ ಅವರು ಮೊದಲು ತಮ್ಮ ಪತ್ನಿಯ ತಲೆಗೆ ಗುಂಡು ಹಾರಿಸಿದ್ದಾರೆ. ಗುಂಡೇಟಿನ ಸದ್ದು ಕೇಳಿ ಮಗ ಮತ್ತು ಸೋದರಳಿಯ ಓಡಿಬಂದು ಬಾಗಿಲು ತೆರೆದಿದ್ದಾರೆ. ಬಾಗಿಲು ತೆರೆದ ತಕ್ಷಣ ತಮ್ಮ ಸೋದರಳಿಯನ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಂತರ ಗಾಯಕ್ವಾಡ್ ಅವರು ತಮ್ಮ ತಲೆಗೆ ಗುಂಡು ಹಾರಿಸಿಕೊಂಡಿದ್ದಾರೆ.
ಮೂವರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದ್ದಾರೆ. ಪತ್ನಿ ಮೋನಿ ಗಾಯಕ್ವಾಡ್(44) ಮತ್ತು ಸೋದರಳಿಯ ದೀಪಕ್ (35) ಎಂದು ಗುರುತಿಸಲಾಗಿದೆ.