ಮಂಗಳೂರು ಸ್ಫೋಟ ‘ಭಯೋತ್ಪಾದನಾ ಕೃತ್ಯ’: ರಾಜ್ಯದ ಉನ್ನತ ಪೊಲೀಸ್‌ ಮೂಲ ಮಾಹಿತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಮಂಗಳೂರಿನಲ್ಲಿ ನಡೆದ ಸ್ಫೋಟ ಪ್ರಕರಣ “ಆಕಸ್ಮಿಕವಲ್ಲ” ಅದೊಂದು “ಭಯೋತ್ಪಾದಕ ಕೃತ್ಯ” ಎಂದು ರಾಜ್ಯದ ಉನ್ನತ ಪೊಲೀಸ್ ಮೂಲಗಳು ಭಾನುವಾರ ದೃಢಪಡಿಸಿವೆ.
ಈ ಬಗ್ಗೆ ಟ್ವೀಟ್‌ ಮಾಡಿರುವ ರಾಜ್ಯ ಪೊಲೀಸ್ ಮಹಾನಿರ್ದೇಶಕರ (ಡಿಜಿಪಿ) ಪ್ರವೀನ್‌ ಸೂದ್‌, “ಇದೊಂದು ಭಯೋತ್ಪಾದಕ ಕೃತ್ಯವೆಂದು ದೃಢೀಕರಿಸಲ್ಪಟ್ಟಿದೆ. ಗಂಭೀರ ಹಾನಿಯನ್ನುಂಟು ಮಾಡುವ ಉದ್ದೇಶದಿಂದ ನಟಡೆಸಲಾದ ಭಯೋತ್ಪಾದಕ ಕೃತ್ಯವಾಗಿದೆ. ರಾಜ್ಯ ಪೊಲೀಸರು, ಕೇಂದ್ರ ಏಜೆನ್ಸಿಗಳೊಂದಿಗೆ ಆಳವಾದ ತನಿಖೆ ನಡೆಸುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಏನಿದು ಘಟನೆ?
ಶನಿವಾರ ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣೆ ಬಳಿ ಚಲಿಸುತ್ತಿದ್ದ ಆಟೋ ರಿಕ್ಷಾದಲ್ಲಿ ನಿಗೂಢ ಸ್ಪೋಟವಾಗಿತ್ತು. ಈ ಸಂಬಂಧ ತನಿಖೆ ನಡೆಸಿದ ಪೊಲೀಸರಿಗೆ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿದ್ದವು. ಸ್ಪೋಟಗೊಂಡ ಆಟೋದಲ್ಲಿ ಎರಡು ಬ್ಯಾಟರಿ, ನಟ್ಟು​ ಬೋಲ್ಟ್​​, ಸರ್ಕ್ಯೂಟ್​​ ರೀತಿಯ ವೈರಿಂಗ್ ಮಾಡಿರುವ ವಸ್ತು ಪತ್ತೆಯಾಗಿದೆ. ಲಘು ತೀವ್ರತೆಯ ಸ್ಫೋಟಕ ಬಳಸಿರುವ ಶಂಕೆ ವ್ಯಕ್ತವಾಗಿದ್ದು ಈಗಾಗಲೇ ಸ್ಥಳದಲ್ಲಿ ಸಿಕ್ಕಿರುವ ವಸ್ತುಗಳನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು.

“ಸಂಜೆ 5.15 ರ ಸುಮಾರಿಗೆ ಆಟೋರಿಕ್ಷಾದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪ್ರಯಾಣಿಕರು ಸಾಗಿಸುತ್ತಿದ್ದ ಬ್ಯಾಗ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಚಾಲಕ ಹೇಳಿದ್ದಾರೆ. ಚಾಲಕ ಮತ್ತು ಪ್ರಯಾಣಿಕರಿಗೆ ಸುಟ್ಟ ಗಾಯಗಳಾಗಿವೆ. ನಾವು ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.
ಘಟನೆಯ ನಂತರ, ವಿಧಿವಿಜ್ಞಾನ ತಂಡಗಳು ಮಾದರಿಗಳನ್ನು ಸಂಗ್ರಹಿಸಲು ಸ್ಥಳಕ್ಕೆ ಬಂದಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!