ಹೊಸದಿಗಂತ ಡಿಜಿಟಲ್ ಡೆಸ್ಕ್:
ಕನ್ನಡ ಚಿತ್ರರಂಗದಲ್ಲಿ ನಾಲ್ಕೂವರೆ ದಶಕಗಳ ಕಾಲ ತಮ್ಮ ಅಮೋಘ ಅಭಿನಯದಿಂದ ಪ್ರೇಕ್ಷಕರನ್ನು ರಂಜಿಸಿದ ಹಿರಿಯ ನಟಿ ಡಾ.ಲೀಲಾವತಿ ಇಂದು ನಿಧನರಾಗಿದ್ದಾರೆ.
ಕೆಲವು ವರ್ಷಗಳಿಂದ ವಯೋಸಹಜ ಕಾಯಿಲೆಯಿಂದ ಹಾಸಿಗೆ ಹಿಡಿದಿದ್ದರು. ಇಂದು ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಗೆಜ್ಜೆ ಪೂಜೆ, ಬಿಳಿ ಹೆಂಡ್ತಿ, ನಾಗರಹಾವು, ನಾ ನಿನ್ನ ಮರೆಯಲಾರೆ, ಮದುವೆ ಮಾಡಿ ನೋಡು, ಸಂತ ತುಕಾರಾಂ, ತುಂಬಿದ ಕೊಡ, ಕಣ್ತೆರೆದು ನೋಡು, ರಾಣಿ ಹೊನ್ನಮ್ಮ, ಗೆಜ್ಜೆ ಪೂಜೆ, ಸಿಪಾಯಿರಾಮು, ಭಕ್ತ ಕುಂಬಾರ, ಸೇರಿದಂತೆ ಕನ್ನಡ ಮಾತ್ರವಲ್ಲದೇ, ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲಿ 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದ ಲೀಲಾವತಿ ಅವರನ್ನು ಹುಡುಕಿಬಂದಿತ್ತು ಹತ್ತು ಹಲವು ಪ್ರಶಸ್ತಿ-ಪುರಸ್ಕಾರಗಳು….
ಪ್ರಶಸ್ತಿ-ಪುರಸ್ಕಾರಗಳು
2008 – ತುಮಕೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್
2006- ಅತ್ತ್ಯುತ್ತಮ ಪೋಷಕನಟಿ ಫಿಲಂಫೇರ್ ಕನ್ನಡ – ಕನ್ನಡದ ಕಂದ
1999-2000 – ಡಾ. ರಾಜಕುಮಾರ್ ಜೀವಮಾನ ಸಾಧನೆ ಪ್ರಶಸ್ತಿ
ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಗಳು
ಅತ್ತ್ಯುತ್ತಮ ಪೋಷಕನಟಿ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.