ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ನಕಲಿ ಔಷಧ ಮಾರಾಟಗಾರರ ವಿರುದ್ಧ ಕಾರ್ಯಾಚರಣೆ ನಡೆಸಿ ಕೇಸ್ಗಳನ್ನು ದಾಖಲು ಮಾಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.
ನಕಲಿ ಔಷಧ ಜಾಲವನ್ನು ಪತ್ತೆ ಹಚ್ಚುವ ಕೆಲಸ ಮಾಡುತ್ತಿದ್ದೇವೆ. ಉತ್ತರ ಪ್ರದೇಶ, ಹಿಮಾಚಲ ಪ್ರದೇಶ, ಉತ್ತರಾಖಂಡಗಳಲ್ಲಿ ಈ ನಕಲಿ ಔಷಧ ತಯಾರಿಕಾ ಘಟಕಗಳು ಇವೆ. ಈ ನಕಲಿ ಔಷಧ ರಾಷ್ಟ್ರಮಟ್ಟದ ಸಮಸ್ಯೆಯಾಗಿದೆ. ಇದನ್ನು ಹತ್ತಿಕ್ಕುವ ಪ್ರಯತ್ನವನ್ನು ಸರ್ಕಾರ ನಡೆಸಿದೆ ಎಂದು ಹೇಳಿದರು.
ಮೆಡಿಕಲ್ ಶಾಪ್ಗಳಲ್ಲಿ ಔಷಧಗಳನ್ನು ಪಡೆದು ಅದನ್ನು ಪರಿಶೀಲಿಸುವ ಕೆಲಸ ಆಗಿದೆ. ರಾಜ್ಯದಲ್ಲೂ ಔಷಧ ನಿಯಂತ್ರಣ ಇಲಾಖೆ ನಕಲಿ ಔಷಧ ತಯಾರಕರು ಹಾಗೂ ಮಾರಾಟಗಾರರ ವಿರುದ್ಧ ಕ್ರಮಗಳನ್ನು ಕೈಗೊಂಡಿದೆ. ಜೊತೆಗೆ ಪ್ರಕರಣಗಳನ್ನು ದಾಖಲಿಸಿದೆ ಎಂದು ಸಚಿವರು ಮಾಹಿತಿ ನೀಡಿದರು.