October 12, 2026
Monday, October 12, 2026
spot_img

ರೌಡಿಸಂ ಚಟುವಟಿಕೆಗಳ ವಿರುದ್ಧ ಕ್ರಮ: ರಾಜ್ಯದಲ್ಲಿ ಆ್ಯಂಟಿ-ರೌಡಿ ಸ್ಕ್ವಾಡ್‌ ಸ್ಥಾಪನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದಲ್ಲಿ ರೌಡಿಸಂ ಹಾಗೂ ಇನ್ನಿತರ ಸಮಾಜಘಾತುಕ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಉದ್ದೇಶದಿಂದ ರಾಜ್ಯ ಪೊಲೀಸ್‌ ಇಲಾಖೆ ಆ್ಯಂಟಿ-ರೌಡಿ ಸ್ಕ್ವಾಡ್‌ಗಳನ್ನು ಸ್ಥಾಪಿಸಲು ಆದೇಶಿಸಿದೆ.

ರೌಡಿಗಳ ಚಟುವಟಿಕೆಗಳ ಮೇಲೆ ನಿಗಾವಹಿಸುವುದನ್ನು ಬಲಪಡಿಸುವುದು, ಅಪರಾಧ ಜಾಲಗಳನ್ನು ಭೇದಿಸುವುದು ಹಾಗೂ ತಡೆಗಟ್ಟುವ ಕಾನೂನುಗಳ ಕಟ್ಟುನಿಟ್ಟಿನ ಜಾರಿಯನ್ನು ಖಚಿತಪಡಿಸುವುದು ಈ ಕ್ರಮದ ಮುಖ್ಯ ಉದ್ದೇಶವಾಗಿದೆ.

ಸುತ್ತೋಲೆಯ ಪ್ರಕಾರ, ಪ್ರತಿ ಪೊಲೀಸ್ ಸರ್ಕಲ್‌ನಲ್ಲಿ ಸರ್ಕಲ್ ಇನ್‌ಸ್ಪೆಕ್ಟರ್ ಅವರ ಮೇಲ್ವಿಚಾರಣೆಯಲ್ಲಿ ವಿಶೇಷ ರೌಡಿ ಸ್ಕ್ವಾಡ್ ರಚಿಸಲಾಗುತ್ತದೆ. ಜತೆಗೆ ಪೊಲೀಸ್ ಇನ್‌ಸ್ಪೆಕ್ಟರ್ ನೇತೃತ್ವದ ಪ್ರತಿಯೊಂದು ಪೊಲೀಸ್ ಠಾಣೆಯಲ್ಲೂ ಪ್ರತ್ಯೇಕ ಆ್ಯಂಟಿ-ರೌಡಿ ಸ್ಕ್ವಾಡ್‌ಗಳನ್ನು ಸ್ಥಾಪಿಸಲಾಗುತ್ತದೆ.

ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು, ನಾಗರಿಕರ ಹಕ್ಕುಗಳನ್ನು ರಕ್ಷಿಸಲು ಹಾಗೂ ಶಾಂತಿಯುತ ವಾತಾವರಣವನ್ನು ಖಚಿತಪಡಿಸಲು ರೌಡಿಗಳ ಚಟುವಟಿಕೆಗಳನ್ನು ನಿಯಂತ್ರಿಸುವುದು ಅತ್ಯಗತ್ಯ ಎಂದು ತಿಳಿಸಲಾಗಿದೆ. ರೌಡಿಗಳಿಂದಾಗಿ ಸಾರ್ವಜನಿಕರಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದ್ದು, ಸಾಮಾಜಿಕ ಸೌಹಾರ್ದತೆಯನ್ನು ಹಾಳಾಗುತ್ತಿದೆ. ಜತೆಗೆ ಸಮುದಾಯದ ಸುರಕ್ಷತೆಗೆ ಧಕ್ಕೆ ಉಂಟಾಗುತ್ತಿದೆ ಎಂದು ಉಲ್ಲೇಖಿಸಲಾಗಿದೆ.

Must Read