May 2, 2026
Saturday, May 2, 2026
spot_img

ಉನ್ನತ ಶಿಕ್ಷಣ ಇಲಾಖೆಯ 32 ವಿಶ್ವವಿದ್ಯಾನಿಲಯಗಳಲ್ಲಿ 1,000 ಸಿಬ್ಬಂದಿ ನೇಮಕಕ್ಕೆ ಕ್ರಮ: ಸಚಿವ ಡಾ.ಎಂ.ಸಿ.ಸುಧಾಕರ್

ಹೊಸದಿಗಂತ ಡಿಜಿಟಲ್ ಡೆಸ್ಕ್:


ರಾಜ್ಯದ ಉನ್ನತ ಶಿಕ್ಷಣ ಇಲಾಖೆಯ ಅಧೀನದಲ್ಲಿರುವ 32 ಸಾರ್ವಜನಿಕ ವಿಶ್ವವಿದ್ಯಾನಿಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಪೈಕಿ ಮೊದಲ ಹಂತವಾಗಿ ಒಂದು ಸಾವಿರ ಸಿಬ್ಬಂದಿಯ ನೇಮಕಾತಿಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ. ಸಿ. ಸುಧಾಕರ್ ಅವರು ವಿಧಾನ ಪರಿಷತ್ತಿನಲ್ಲಿ ತಿಳಿಸಿದ್ದಾರೆ.


ಮೇಲ್ಮನೆಯ ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಡಿ. ಟಿ. ಶ್ರೀನಿವಾಸ್ ಅವರ ಪ್ರಶ್ನೆಗೆ ಸುದೀರ್ಘ ಉತ್ತರ ನೀಡಿದ ಸಚಿವರು, ಶೈಕ್ಷಣಿಕ ಗುಣಮಟ್ಟವನ್ನು ಕಾಯ್ದುಕೊಳ್ಳುವ ದೃಷ್ಟಿಯಿಂದ ಈ ನೇಮಕಾತಿ ಪ್ರಕ್ರಿಯೆಯನ್ನು ಆದ್ಯತೆಯ ಮೇಲೆ ಕೈಗೆತ್ತಿಕೊಳ್ಳಲಾಗಿದೆ. ಉಳಿದ ಸುಮಾರು 3,000 ಹುದ್ದೆಗಳನ್ನು ಮುಂಬರುವ ದಿನಗಳಲ್ಲಿ ಹಂತಹಂತವಾಗಿ ಭರ್ತಿ ಮಾಡಲಾಗುವುದು ಎಂದು ಅವರು ಸದನಕ್ಕೆ ಭರವಸೆ ನೀಡಿದರು.


ಇದೇ ಸಂದರ್ಭದಲ್ಲಿ ವಿಶ್ವವಿದ್ಯಾನಿಲಯಗಳ ಆಡಳಿತಾತ್ಮಕ ವಿಷಯಗಳ ಕುರಿತು ಮಾತನಾಡಿದ ಸಚಿವರು, ವಿವಿಧ ವಿಶ್ವವಿದ್ಯಾನಿಲಯಗಳಿಗೆ ಸಿಂಡಿಕೇಟ್ ಸದಸ್ಯರುಗಳನ್ನು ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ ಅಧಿನಿಯಮದ ಅಡಿಯಲ್ಲಿ ರಾಜ್ಯ ಸರ್ಕಾರವೇ ನೇಮಕ ಮಾಡಲಿದೆ ಎಂದು ಸ್ಪಷ್ಟಪಡಿಸಿದರು. ಶೈಕ್ಷಣಿಕ ಮತ್ತು ಆಡಳಿತಾತ್ಮಕ ಸುಧಾರಣೆಗಳ ಮೂಲಕ ವಿಶ್ವವಿದ್ಯಾನಿಲಯಗಳನ್ನು ಬಲಪಡಿಸಲು ಸರ್ಕಾರ ಬದ್ಧವಾಗಿದೆ ಎಂದು ಅವರು ವಿವರಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !