ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೀದಿನಾಯಿಗಳ ಹಾವಳಿ ವಿಚಾರವಾಗಿ ಕೈಗೊಂಡ ಕ್ರಮಗಳ ಬಗ್ಗೆ ವರದಿ ಸಲ್ಲಿಸದ ಕರ್ನಾಟಕ ಸೇರಿದಂತೆ ಇತರೆ ರಾಜ್ಯಗಳಿಗೆ ಸುಪ್ರೀಂಕೋರ್ಟ್ ಎಚ್ಚರಿಕೆ ನೀಡಿದೆ.
ಪಶ್ಚಿಮಬಂಗಾಳ, ದೆಹಲಿ, ತೆಲಂಗಾಣ ಹೊರತುಪಡಿಸಿ ಉಳಿದ ರಾಜ್ಯಗಳ ಮುಖ್ಯಕಾರ್ಯದರ್ಶಿಗಳು ಅನುಸರಣಾ ವರದಿಗಳನ್ನು ಸಲ್ಲಿಸಲು ವಿಫಲವಾದ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ನಿರ್ದೇಶನ ನೀಡಿದೆ.
ನ್ಯಾಯಮೂರ್ತಿಗಳಾದ ವಿಕ್ರಂನಾಥ್, ಸಂದೀಪ್ ಮೆಹ್ತಾ, ಎಲ್.ಇ.ಅಂಜಾರಿಯಾ ಪೀಠವು ನವೆಂಬರ್ ೩ರಂದು ನಡೆಯಲಿರುವ ಮುಂದಿನ ವಿಚಾರಣೆಗೆ ಅಧಿಕಾರಿಗಳು ಹಾಜರಾಗದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದೆ.
ಬೀದಿಶ್ವಾನಗಳ ಹಾವಳಿ ತಡೆಗೆ ಕ್ರಮ: ವರದಿ ಸಲ್ಲಿಸದ ಕರ್ನಾಟಕ ಸಹಿತ ಉಳಿದ ರಾಜ್ಯ ಸರ್ಕಾರಗಳಿಗೆ ಸುಪ್ರೀಂಕೋರ್ಟ್ ಚಾಟಿ

