ತುಂಗಭದ್ರಾ ಅಣೆಕಟ್ಟಿನಿಂದ ವ್ಯರ್ಥವಾಗುತ್ತಿರುವ ನೀರಿನ ಸಮರ್ಪಕ ಬಳಕೆಗೆ ಕ್ರಮ: ಡಿಕೆಶಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ತುಂಗಭದ್ರಾ ಜಲಾಶಯದಲ್ಲಿ ಹೂಳು ತುಂಬಿ ವ್ಯರ್ಥವಾಗುತ್ತಿರುವ 27 ಟಿಎಂಸಿ ಅಡಿ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ಕಾಂಗ್ರೆಸ್‌ನ ಬಸನಗೌಡ ಬಾದರ್ಲಿ ಅವರ ಪ್ರಶ್ನೆಗೆ ಉತ್ತರ ನೀಡಿದ ಅವರು, ತುಂಗಭದ್ರಾ ಜಲಾಶಯದಲ್ಲಿ ತುಂಬಿರುವ ಹೂಳಿನಿಂದ ನೀರಿನ ಸಂಗ್ರಹ ಕಡಿಮೆಯಾಗಿದೆ. 132 ಟಿಎಂಸಿ ಅಡಿ ಸಾಮರ್ಥ್ಯದ ಜಲಾಶಯ 100 ಟಿಎಂಸಿ ಅಡಿಗೆ ಇಳಿದೆ. ಈ ಕೊರತೆ ನೀಗಿಸಲು ಕೊಪ್ಪಳ ಜಿಲ್ಲೆಯ ನವಲಿ ಹತ್ತಿರ ಸಮತೋಲನ ಜಲಾಶಯ ನಿರ್ಮಿಸಲು ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು.

ನಮ್ಮ ಅಧಿಕಾರಿಗಳು ಸಮತೋಲಿತ ಅಣೆಕಟ್ಟು ನಿರ್ಮಾಣ ಮಾಡದೆ ಪರ್ಯಾಯವಾದ ಆಲೋಚನೆ ತಿಳಿಸಿದ್ದಾರೆ. ನಮ್ಮ ಪಾಲಿನ ನೀರನ್ನು ಪಂಪ್ ಮಾಡಿಕೊಂಡು ಬಳಸಿಕೊಳ್ಳುವ ಬಗ್ಗೆ ಚಿಂತನೆ ಮಾಡಲಾಗುತ್ತಿದೆ. ಇದರಿಂದ ಮೂರು ರಾಜ್ಯಗಳಿಗೆ ಉಪಯೋಗವಾಗಲಿದೆ. ನಮಗೆ ಶೇ.65 ಅವರಿಗೆ ಶೇ.35 ರಷ್ಟು ಉಪಯೋಗವಾಗಲಿದೆ. ಸಮತೋಲಿತ ಅಣೆಕಟ್ಟು ನಿರ್ಮಾಣ ಹಾಗೂ ಹೊಸ ಪ್ರಸ್ತಾವನೆಗಳನ್ನು ಕೇಂದ್ರಕ್ಕೆ ಸಲ್ಲಿಸುತ್ತೇವೆ. ನಾವು ನಮ್ಮ ಪಾಲಿನ ನೀರು ಉಳಿಸಿಕೊಳ್ಳಲು ಬದ್ಧವಾಗಿದ್ದೇವೆ ಎಂದು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here