ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಇರುವ 5267 ಶಿಕ್ಷಕರ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಕಲಬುರಗಿಯಲ್ಲಿ ಇಂದು 78ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಆಚರಿಸಲಾಗುತ್ತಿದ್ದು, ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಎಸ್ ಎಸ್ ಎಲ್ ಸಿ ಫಲಿತಾಂಶ ಕುಸಿತ ಕಂಡ ಹಿನ್ನೆಲೆಯಲ್ಲಿ ಖಾಲಿ ಇರುವ 5267 ಶಿಕ್ಷಕರ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ ಪ್ರಗತಿ ಸಾಧಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ. ಸಮಾಜ ಕಲ್ಯಾಣ, ಬಿಸಿಎಂ ಇಲಾಖೆ ಹಾಗೂ ಅಲ್ಪಸಂಖ್ಯಾತ ಇಲಾಖೆ ವತಿಯಿಂದ ಹೊಸದಾಗಿ ವಸತಿ ಶಾಲೆ ಹಾಗೂ ವಸತಿ ನಿಲಯಗಳನ್ನು ನಿರ್ಮಿಸಲಾಗುತ್ತಿದೆ ಎಂದರು.
7 ಜಿಲ್ಲೆಗಳಲ್ಲಿ 204 ಕೋಟಿ ರೂ.ವೆಚ್ಚದಲ್ಲಿ ವಸತಿ ಶಾಲೆಗಳ ನಿರ್ಮಾಣ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ತಯಾರಿಗೆ ತರಬೇತಿ ಕೇಂದ್ರ, ಕಲಬುರಗಿಯಲ್ಲಿ 100 ಕೋಟಿ ವೆಚ್ಚದಲ್ಲಿ ನಿಮ್ಹಾನ್ಸ್ ಆಸ್ಪತ್ರೆ, ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆ ನಿರ್ಮಾಣಕ್ಕೆ 220 ಕೋಟಿ ರೂ. ಒದಗಿಸಲಾಗುವುದು ಎಂದು ಹೇಳಿದ್ದಾರೆ.