October 17, 2026
Saturday, October 17, 2026
spot_img

ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಹುದ್ದೆ ಭರ್ತಿಗೆ ಕ್ರಮ: ಸಚಿವ ಯು.ಟಿ. ಖಾದರ್

ಹೊಸ ದಿಗಂತ ವರದಿ, ಮಂಗಳೂರು:

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸುಮಾರು 900ರಷ್ಟು ಹುದ್ದೆಗಳು ಖಾಲಿ ಇದ್ದು, ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.

ಗುತ್ತಿಗೆ ಆಧಾರದಲ್ಲಿ ನೇಮಕ

ಮಂಗಳೂರಿನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಇರುವುದು ಗಮನದಲ್ಲಿದೆ. ಖಾಯಂ ನೇಮಕೆ ಪ್ರಕ್ರಿಯೆ ಆಗುವವರೆಗೆ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಲಾಗುವುದು. ಹಂತ ಹಂತವಾಗಿ ಸರ್ಕಾರಿ ಆಸ್ಪತ್ರೆಗಳ ವಿವಿಧ ಸಮಸ್ಯೆಗಳನ್ನು ಬಗೆಹರಿಸಲು ಒತ್ತು ನೀಡುವುದಾಗಿ ತಿಳಿಸಿದರು.

ಎಂಬಿಬಿಎಸ್ ಆದವರು ಸೇವೆ ಸಲ್ಲಿಸಲು ಬಂದರೆ ಅವರಿಗೆ ಡಿಎಚ್‌ಒಗಳು ಒಂದು ವಾರದೊಳಗೆ ತಾತ್ಕಾಲಿಕ ನೇಮಕಾತಿಯ ಆದೇಶ ಪತ್ರ ನೀಡಬೇಕು. ಇಲ್ಲದಿದ್ದಲ್ಲಿ ಡಿಎಚ್‌ಒಗಳನ್ನು ಅಮಾನತು ಮಾಡಲಾಗುವುದು. ನೇಮಕ ಆದವರಿಗೆ 60,000 ವೇತನ ನೀಡಲಾಗುವುದು ಎಂದು ಯು.ಟಿ.ಖಾದರ್ ತಿಳಿಸಿದರು.

ಖುದ್ದಾಗಿ ಸ್ಥಳಕ್ಕೆ ತೆರಳಿ ಪರಿಶೀಲನೆ

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಮತ್ತು ಸಿಬ್ಬಂದಿಗಳು ಯಾವ ರೀತಿ ಸೇವೆ ಸಲ್ಲಿಸುತ್ತಿದ್ದಾರೆ ಎಂಬುದನ್ನು ಖುದ್ದಾಗಿ ಸ್ಥಳಕ್ಕೆ ತೆರಳಿ ಪರಿಶೀಲಿಸುತ್ತೇನೆ. ಈ ನಿಟ್ಟಿನಲ್ಲಿ ರಾತ್ರಿ ವೇಳೆ ಆಸ್ಪತ್ರೆಗಳಿಗೆ ಭೇಟಿ ನೀಡಲು ನಿರ್ಧರಿಸಿದ್ದು, ಇದೇ ರೀತಿ ಜಿಲ್ಲೆ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕೂಡ ದಿಢೀರ್ ರಾತ್ರಿ ಪರಿಶೀಲಿಸಲು ಸೂಚಿಸುವುದಾಗಿ ಅವರು ತಿಳಿಸಿದರು.

Must Read