spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, September 20, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕೊಡಗು ಜಿಲ್ಲೆಯ ತಜ್ಞ ವೈದ್ಯರ ಖಾಲಿ ಹುದ್ದೆ ಭರ್ತಿಗೆ ಕ್ರಮ: ಸಚಿವ ಡಾ.ಸುಧಾಕರ್

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ವರದಿ,ಮಡಿಕೇರಿ:

ಜಿಲ್ಲೆಯ ಸರಕಾರಿ ಆಸ್ಪತ್ರೆಗಳಲ್ಲಿ 29 ತಜ್ಞ ವೈದ್ಯರ ಹುದ್ದೆ ಖಾಲಿ ಇದ್ದು, ಸಿಪಿಎಸ್ ವ್ಯಾಸಂಗ ಪೂರೈಸಿ ಬರುವ ತಜ್ಞರನ್ನು ನೇಮಿಸಿಕೊಳ್ಳಲು ಕ್ರಮವಹಿಸಲಾಗುವುದು. ಕಡ್ಡಾಯ ಸರ್ಕಾರಿ ಸೇವೆ ಸಲ್ಲಿಸುವ ವೈದ್ಯರನ್ನು ನೇಮಿಸಿಕೊಳ್ಳಲು ಕ್ರಮವಹಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಭರವಸೆ ನೀಡಿದ್ದಾರೆ.
ವಿಧಾನ ಮಂಡಲದ ಅಧಿವೇಶನದಲ್ಲಿ ಕೊಡಗು ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರ ಕೊರತೆಯಿಂದ ಸಾರ್ವಜನಿಕರಿಗೆ ಸರಿಯಾದ ವೈದ್ಯಕೀಯ ಸೇವೆ ದೊರಕದಿರುವ ಬಗ್ಗೆ ಸರ್ಕಾರದ ಗಮನಕ್ಕೆ ಬಂದಿದೆಯೇ ಎಂಬ ವಿಧಾನ‌ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಜಿಲ್ಲಾ ಆಸ್ಪತ್ರೆಗೆ ಮಂಜೂರಾದ 28 ಹುದ್ದೆಗಳ 10, ಜನರಲ್ ಆಸ್ಪತ್ರೆಗೆ ಮಂಜೂರಾದ 22 ಹುದ್ದೆಗಳ 8, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಮಂಜೂರಾದ 25 ಹುದ್ದೆಗಳ ಪೈಕಿ 11 ತಜ್ಞ ವೈದ್ಯರ ಹುದ್ದೆಗಳು ಖಾಲಿ ಇರುವುದಾಗಿ ವಿವರಿಸಿದರು.
ಜಿಲ್ಲೆಯಲ್ಲಿ ಖಾಲಿ ಇರುವ ತಜ್ಞ ವೈದ್ಯರ ಹುದ್ದೆಗಳಿಗೆ ಕಾಲಮಿತಿಯೊಳಗೆ ತಜ್ಞ ವೈದ್ಯರನ್ನು ನಿಯೋಜನೆ ಮಾಡುವಂತೆ ವೀಣಾ ಅಚ್ಚಯ್ಯ ಅವರು ಮನವಿ ಮಾಡಿದರು.
ವಿಶೇಷ ನೇರ ನೇಮಕಾತಿ ಸಮಿತಿ ಮೂಲಕ ಕಳೆದ ಮೇ ತಿಂಗಳಿನಲ್ಲಿ ಖಾಲಿ ಇರುವ ತಜ್ಞ ವೈದ್ಯರ ಹುದ್ದೆಗಳನ್ನು ಭರ್ತಿ ಮಾಡುವ ಸಂದರ್ಭದಲ್ಲಿ ಕೊಡಗು ಜಿಲ್ಲೆಯಲ್ಲಿ ಖಾಲಿ ಇದ್ದ 31 ತಜ್ಞ ವೈದ್ಯರನ್ನು ನೇಮಕ ಮಾಡಲಾಗಿತ್ತು. ಈ ಪೈಕಿ 9 ತಜ್ಞ ವೈದ್ಯರುಗಳು ಮಾತ್ರ ಕರ್ತವ್ಯಕ್ಕೆ ವರದಿ ಮಾಡಿಕೊಂಡಿದ್ದಾರೆ. ಸೇವಾ ನಿರತ ಸ್ನಾತಕೋತ್ತರ ವ್ಯಾಸಂಗ ಪೂರೈಸಿ ಬಂದಿರುವ 4 ತಜ್ಞ ವೈದ್ಯರನ್ನು ಜಿಲ್ಲೆಯಲ್ಲಿರುವ ಆಸ್ಪತ್ರೆಗಳಿಗೆ ನೇಮಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 29 ತಜ್ಞ ವೈದ್ಯರ ಹುದ್ದೆಗಳು ಖಾಲಿ ಇದ್ದು, ಸಿಪಿಎಸ್ ವ್ಯಾಸಂಗ ಪೂರೈಸಿ ಬರುವ ತಜ್ಞರನ್ನು,. ಕಡ್ಡಾಯ ಸರ್ಕಾರಿ ಸೇವೆ ಸಲ್ಲಿಸುವ ವೈದ್ಯರನ್ನು ನೇಮಿಸಿಕೊಳ್ಳಲು ಕ್ರಮವಹಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮಾಹಿತಿ ನೀಡಿದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss