ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರೀಯ ಸ್ವಯಂಸೇವಕ ಸಂಘದ ವಿರುದ್ಧ ಕೈಗೊಳ್ಳುವ ಕ್ರಮಗಳು ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಿರುಗುಬಾಣವಾಗಲಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಆರೆಸ್ಸೆಸ್ ಪಥಸಂಚಲನದ ಅನುಮತಿಗೆ ಸಂಬಂಧಿಸಿದಂತೆ ನ್ಯಾಯಾಲಯ ರಾಜ್ಯ ಸರ್ಕಾರದ ನಡೆಗೆ ಆಕ್ಷೇಪ ವ್ಯಕ್ತಪಡಿಸಿದೆ.
ಬಿಜೆಪಿ ಯಾವುದೇ ಸಂಘಟನೆಗಳ ಕಾರ್ಯಕ್ರಮಕ್ಕೆ ಎಂದೂ ಕಡಿವಾಣ ಹಾಕಿಲ್ಲ. ಅದೇ ರೀತಿ ಕಾಂಗ್ರೆಸ್ ಕೂಡ ನಡೆದುಕೊಳ್ಳಬೇಕಾಗಿದೆ ಎಂದು ತಿಳಿಸಿದ್ದಾರೆ. ಪ್ರತಿವರ್ಷ ಬಿಜೆಪಿ ಸರ್ಕಾರ ಇದ್ದ ಅವಧಿಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ 7ರಿಂದ 8 ಸಾವಿರ ಕೋಟಿ ರೂಪಾಯಿ ನೀಡಿದೆ. ಇದೇ ಅನುದಾನದಲ್ಲಿ ಈಗಲೂ ಬಿಬಿಎಂಪಿಯಲ್ಲಿ ರಸ್ತೆ ದುರಸ್ತಿ ಕೆಲಸಗಳು ನಡೆಯುತ್ತಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬೆಂಗಳೂರಿನ ಅಭಿವೃದ್ಧಿಗೆ ಆದ್ಯತೆ ನೀಡಿಲ್ಲ ಎಂದು ಹೇಳಿದರು.
ರಾಜ್ಯದಲ್ಲಿ ಗುತ್ತಿಗೆದಾರರಿಗೆ 33 ಸಾವಿರ ಕೋಟಿ ರೂಪಾಯಿಯಷ್ಟು ಬಾಕಿ ಇದೆ. ಅಷ್ಟೊಂದು ಹಣ ನೀಡಲು ರಾಜ್ಯ ಸರ್ಕಾರದ ಖಜಾನೆಯಲ್ಲಿ ಹಣವೇ ಇಲ್ಲ ಎಂದು ತಿಳಿಸಿದರು.
ಆರೆಸ್ಸೆಸ್ ವಿರುದ್ಧದ ಕ್ರಮಗಳೇ ಮುಂದೆ ಕಾಂಗ್ರೆಸ್ ಪಕ್ಷಕ್ಕೆ ತಿರುಗುಬಾಣವಾಗಲಿದೆ: ಆರ್. ಅಶೋಕ ಭವಿಷ್ಯ
