October 17, 2026
Saturday, October 17, 2026
spot_img

ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಆಕ್ಟಿವಾ ಕಳ್ಳತನ: ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಹೊಸದಿಗಂತ ವರದಿ ಅಂಕೋಲಾ:

ಪಟ್ಟಣದ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಆಕ್ಟಿವಾ ದ್ವಿಚಕ್ರ ವಾಹನ ಕಳ್ಳತನವಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಕಾಕರಮಠ ನಿವಾಸಿ ಫೈರೋಜ್ ಸತ್ತಾರ್ ಖಾನ್ (58) ಅವರು ಜೂನ್ 26ರಂದು ಬೆಳಿಗ್ಗೆ ತಮ್ಮ ಕೆಎ-30 ಇಇ-2938 ನೋಂದಣಿ ಸಂಖ್ಯೆಯ, ಅಂದಾಜು 35 ಸಾವಿರ ರೂ. ಮೌಲ್ಯದ ಆಕ್ಟಿವಾವನ್ನು ಬಸ್ ನಿಲ್ದಾಣದ ನೀರಿನ ಟ್ಯಾಂಕ್ ಸಮೀಪ ನಿಲ್ಲಿಸಿದ್ದರು. ಬೆಳಿಗ್ಗೆ 7.10ರಿಂದ 7.25ರ ನಡುವಿನ ಅವಧಿಯಲ್ಲಿ ದುಷ್ಕರ್ಮಿಗಳು ವಾಹನವನ್ನು ಕಳವು ಮಾಡಿದ್ದಾರೆ ಎನ್ನಲಾಗಿದೆ.

ಎರಡು ದಿನಗಳ ಕಾಲ ಸ್ವತಃ ಹುಡುಕಾಟ ನಡೆಸಿದರೂ ವಾಹನ ಪತ್ತೆಯಾಗದ ಹಿನ್ನೆಲೆಯಲ್ಲಿ ಫೈರೋಜ್ ಅವರು ಅಂಕೋಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಕಳ್ಳರ ಪತ್ತೆಗೆ ತನಿಖೆ ಆರಂಭಿಸಿದ್ದಾರೆ.

Must Read