ದೇಶದಲ್ಲಿ 60 ಸಾವಿರ ಗಡಿ ದಾಟಿದ ‘ಕೊರೊನಾ’ ಸಕ್ರಿಯ ಪ್ರಕರಣ: 9,111 ಹೊಸ ಕೇಸ್, 24 ಗಂಟೆಗಳಲ್ಲಿ 27 ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್‌ :

ದೇಶದಲ್ಲಿ ಕೋವಿಡ್‌ ಪ್ರಕರಣಗಳು ಏರಿಕೆಯಾಗುತ್ತಿದ್ದು, ಜನರಲ್ಲಿ ಆತಂಕ ಹೆಚ್ಚಿಸುತ್ತಿದೆ. ಇದೀಗ ದೇಶದಲ್ಲಿ ಕೋವಿಡ್‌ ಸಕ್ರಿಯ ಪ್ರಕರಣಗಳ ಸಂಖ್ಯೆ 60,313ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಕಳೆದ 24 ಗಂಟೆಗಳಲ್ಲಿ ಕೊರೊನಾ ವೈರಸ್‌ ಸೊಂಕು ದೃಢಪಟ್ಟ 9,111 ಹೊಸ ಪ್ರಕರಣಗಳು ವರದಿಯಾಗಿವೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 60 ಸಾವಿರ ದಾಟಿದೆ.

ಒಂದೇ ದಿನ 27 ಜನರು ಮೃತಪಟ್ಟಿದ್ದಾರೆ. ಒಟ್ಟಾರೆ ಸಾವಿನ ಸಂಖ್ಯೆ 5,31,141ಕ್ಕೆ ಏರಿಕೆಯಾಗಿದೆ.

ಭಾನುವಾರ 10 ಸಾವಿರ ಪ್ರಕರಣಗಳು ವರದಿಯಾಗಿದ್ದವು. ಹಿಂದಿನ ದಿನಕ್ಕೆ ಹೋಲಿಸಿದರೆ ಹೊಸ ಪ್ರಕರಣಗಳಲ್ಲಿ ಇಳಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ.

ಕೋವಿಡ್‌ ಪ್ರಕರಣ ಹೆಚ್ಚಳವಾಗುತ್ತಿರುವ ರಾಜ್ಯಗಳ ಪೈಕಿ ಕೇರಳ ಮೊದಲ ಸ್ಥಾನದಲ್ಲಿದ್ದರೆ, 2ನೇ ಸ್ಥಾನದಲ್ಲಿ ರಾಷ್ಟ್ರ ರಾಜಧಾನಿ ದೆಹಲಿ ಇದೆ. ಮತ್ತೊಂದು ಕಡೆ ಮಹಾರಾಷ್ಟ್ರದಲ್ಲೂ ಕೊರೊನಾ ತನ್ನ ಉಗ್ರ ರೂಪ ತೋರುತ್ತಿದ್ದು, ಕಳೆದ 24 ಗಂಟೆಯಲ್ಲಿ 660 ಪ್ರಕರಣಗಳು ಮಹಾರಾಷ್ಟ್ರದಲ್ಲಿ ಪತ್ತೆಯಾಗಿವೆ. ಸದ್ಯದ ಬೆಳವಣಿಗೆ ಬಗ್ಗೆ ತಜ್ಞರು ಎಚ್ಚರಿಕೆ ನೀಡಿದ್ದು, ಮುಂದಿನ ಪರಿಸ್ಥಿತಿ ಕುರಿತು ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!