ಬಿಜೆಪಿ ಗೆಲುವಿಗೆ ಗುಮ್ಮಟನಗರಿಯಲ್ಲಿ ಕಾರ್ಯಕರ್ತರ ವಿಜಯೋತ್ಸವ

ಹೊಸದಿಗಂತ ವರದಿ, ವಿಜಯಪುರ:

ಮೂರು ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿದ ಹಿನ್ನೆಲೆ ನಗರದಲ್ಲಿ ಭಾನುವಾರ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.

ಇಲ್ಲಿನ ಸಿದ್ಧೇಶ್ವರ ದೇವಾಲಯದ ಎದುರು ಜಮಾಯಿಸಿದ ನೂರಾರು ಕಾರ್ಯಕರ್ತರು ಪಟಾಕಿ ಸಿಡಿಸಿ, ಪರಸ್ಪರ ಸಿಹಿ ತಿನಿಸಿ ಸಂಭ್ರಮಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್. ಪಾಟೀಲ ಕೂಚಬಾಳ ಮಾತನಾಡಿ, ರಾಜಸ್ತಾನ, ಮಧ್ಯಪ್ರದೇಶ, ಛತ್ತೀಸಘಢ ರಾಜ್ಯದಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿದೆ, ಆ ಮೂಲಕ ಈ ಚುನಾವಣೆ ಮುಂಬರುವ ಲೋಕಸಭೆ ಚುನಾವಣೆಗೆ ದಿಕ್ಸೂಚಿಯಾಗಿದೆ ಎಂದರು. ಜನಪರ ಆಡಳಿತ, ಶುದ್ದ ಆಡಳಿತಕ್ಕೆ ಇಡೀ ಭಾರತವೇ ಮೆಚ್ಚಿದೆ, ಉಕ್ರೇನ್ ಯುದ್ದ ಸಂದರ್ಭದಲ್ಲಿ ತೊಂದರೆಯಲ್ಲಿ ಸಿಲುಕಿದ ಭಾರತೀಯರನ್ನು ಮೋದಿಜಿ ಯುದ್ಧ ನಿಲ್ಲಿಸಿ ಅವರನ್ನು ಸುರಕ್ಷಿತವಾಗಿ ಕರೆ ತಂದರು. ಇದರಿಂದ ಅನೇಕ ರಾಷ್ಟ್ರಗಳು ಸಹ ತಮ್ಮ ನಿವಾಸಿಗಳನ್ನು ಸುರಕ್ಷಿತವಾಗಿ ಕರೆಯಿಸಿಕೊಳ್ಳಲು ಸಾಧ್ಯವಾಯಿತು ಎಂದರು.

ಬಿಜೆಪಿ ನಗರ ಮಂಡಳ ಅಧ್ಯಕ್ಷ ಮಳುಗೌಡ ಪಾಟೀಲ ಮಾತನಾಡಿದರು.

ಬಸವರಾಜ ಬಿರಾದಾರ, ವಿವೇಕಾನಂದ ಡಬ್ಬಿ, ಪ್ರೇಮಾನಂದ ಬಿರಾದಾರ, ರಾಜು ತಾಳಿಕೋಟಿ, ಛಾಯಾ ಮಸಿಯನವರ, ಬಸವರಾಜ ಬೈಚಬಾಳ, ರಾಹುಲ್ ಜಾಧವ, ಎಂ.ಎಸ್. ಕರಡಿ, ಭೀಮಾಶಂಕರ ಹದನೂರ, ಕೃಷ್ಣಾ ಗುನ್ನಾಳಕರ, ವಿಜಯ ಜೋಶಿ ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!