Wednesday, August 10, 2022

Latest Posts

ಜಿ.ಪಂ., ತಾ.ಪಂ.ಚುನಾವಣೆ ಎದುರಿಸಲು ಕಾರ್ಯಕರ್ತರು ಸನ್ನದ್ಧರಾಗಬೇಕು: ಗದ್ದಿಗೌಡರ

ಹೊಸ ದಿಗಂತ ವರದಿ, ಬಾಗಲಕೋಟೆ:

ಮುಂಬರುವ ಜಿಲ್ಲಾ‌‌ ಹಾಗೂ ತಾಲ್ಲೂಕ ಪಂಚಾಯತ ಚುನಾವಣೆಯನ್ನು ಎದುರಿಸಲು ಪಕ್ಷದ ಕಾರ್ಯಕರ್ತರು ಸನ್ನದ್ದರಾಗಬೇಕು ಎಂದು ಸಂಸದ‌ ಪಿ.ಸಿ.ಗದ್ದಿಗೌಡರ‌ ಬಿಜೆಪಿಯ ಕಾರ್ಯಕರ್ತರಿಗೆ ಕರೆ ನೀಡಿದರು.
ನಗರದ ವೀರಭದ್ರೇಶ್ವರ ಸಾಂಸ್ಕೃತಿಕ ಭವನದಲ್ಲಿ ಭಾನುವಾರ ಆಯೋಜಿಸಿದ್ದ ಜಿಲ್ಲಾ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಬಿಜೆಪಿ ಕಾರ್ಯಕರ್ತರು ಹೆಚ್ಚು ಕ್ರೀಯಾಶೀಲವಾಗಿ ಕೆಲಸ ಮಾಡಿದ್ದರಿಂದ ಹೆಚ್ಚಿನ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ ಎಂದರು.
ಭಾರತೀಯ ಜನತಾ ಪಕ್ಷ ಇಡೀ ಪ್ರಪಂಚದಲ್ಲಿ ದೊಡ್ಡ ಪಕ್ಷವಾಗಿದೆ ಸದಾ ಸಂಘಟನೆಯಲ್ಲಿರುವ ಪಕ್ಷ ಬಿಜೆಪಿಯಾಗಿದೆ.ಗ್ರಾಮ‌ ಪಂಚಾಯತದಿಂದ ಸಂಸತ್ತಿನವರೆಗೆ ಸಾಮಾನ್ಯ ಕಾರ್ಯಕರ್ತ ಸ್ಪರ್ಧೆ ಮಾಡಿದರೂ ಗೆಲುವು ಸಾಧಿಸಬಹುದು ಆ ರೀತಿ ಬಿಜೆಪಿ ಪಕ್ಷ ಬಲಿಷ್ಠವಾಗಿದೆ ಎಂದು ಹೇಳಿದರು.
ಪಕ್ಷದಿಂದ‌ ಆಯ್ಕೆಯಾಗಿ ಜ‌ನಪ್ರತಿನಿಧಿ ಸ್ಥಾನದ ಅಲ.ಕಾರ ಮಾಡುವವರು ಮಾಜಿಗಳಾಗಬಹುದು ಆದರೆ ಪಕ್ಷದ ಕಾರ್ಯಕರ್ತರು ಮತ್ತು‌ ಪದಾಧಿಕಾರಿಗಳು ಎಂದೂ ಮಾಜಿಗಳಾಗಲ್ಲ. ಪಕ್ಷದ ಕಾರ್ಯಕರ್ತರು ಪ್ರಾಮಾಣಿಕ ಕೆಲಸ ಮಾಡಿದ್ದರಿಂದ ಬಿಜೆಪಿ ಇವತ್ತು ಕೇಂದ್ರ‌ಮತ್ತು ರಾಜ್ಯದಲ್ಲಿ ಅಧಿಕಾರದ ಚುಕ್ಕಾಣೆ ಹಿಡಿದಿದೆ. ದೇಶದ ಪ್ರಧಾನಿಯವರು ಮಾಡಿದಂತಹ ಜನಪರ ಕಾರ್ಯಕ್ರಮ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನವರ ಅಭಿವೃದ್ಧಿ ಕೆಲಸಗಳನ್ನು ಜನರಿಗೆ ಮುಟ್ಟಿಸುವ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದು ಕಾರ್ಯಕರ್ತರಿಗೆ ತಿಳಿಸಿದರು.
ಶಾಸಕ ದೊಡ್ಡನಗೌಡ ಪಾಟೀಲ ಮಾತನಾಡಿ, ಬಿಜೆಪಿ‌ ಬೆಳವಣಿಗೆಯಾಗುವ ಪಕ್ಷವಾಗಿದೆ.ಕಾರ್ಯಕರ್ತರು ಈಗಿನಿಂದಲೇ ಮುಂಬರುವ ಜಿ.ಪಂ, ತಾ.ಪಂ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳು ಬಿಜೆಪಿಗೆ ಬರುವಂತೆ‌ ಕೆಲಸ ಮಾಡಬೇಕು ಎಂದರು.
ಬಿಜೆಪಿ‌ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿ, ಪಕ್ಷದಲ್ಲಿ ಜವಾಬ್ದಾರಿ ಹುದ್ದೆಗಳನ್ನು ಪಡೆದವರು ಪಕ್ಷವನ್ನು ಬೇರುಮಟ್ಟದಿಂದ ಗಟ್ಟಿಗೊಳಿಸುವ ಕೆಲಸ ಮಾಡಬೇಕು. ಪಕ್ಷದಲ್ಲಿನ ಕಾರ್ಯಕರ್ತರು ಹುರುಪಿನಿಂದ ಕೆಲಸ ಮಾಡಬೇಕು. ಪಕ್ಷದಲ್ಲಿ ನಿರಂತರ‌ ಸಂಘಟನೆ ಇದೆ. ಮುಂಬರುವ ಜಿಲ್ಲಾ ಹಾಗೂ ತಾಲ್ಲೂಕ ಪಂಚಾಯತಿ ಚುನಾವಣೆಯಲ್ಲಿ ಪಕ್ಷ ಹೆಚ್ಚಿನ ಸ್ಥಾನ ಗೆಲ್ಲಬೇಕಾದರೆ ಕಾರ್ಯಕರ್ತರು ಕ್ರೀಯಾಶೀಲವಾಗಿ ಹಾಗೂ ಪ್ರಾಮಾಣಿಕ ಕೆಲಸ ಮಾಡಬೇಕಾಗಿದೆ ಎಂದು ಹೇಳಿದರು.
ಶಾಸಕ ವೀರಣ್ಣ ಚರಂತಿಮಠ, ಮಾಜಿ ಶಾಸಕ ಪಿ.ಎಚ್.ಪೂಜಾರ, ರಾಜಶೇಖರ ಶೀಲವಂತ, ಎಂ.ಕೆ.ಪಟ್ಟಣಶೆಟ್ಟಿ, ಬೆಳಗಾವಿ ವಿಭಾಗೀಯ ಪ್ರಭಾರಿ ಬಸವರಾಜ ಯಂಕಂಚಿ, ಪ್ರಕಾಶ ಅಕ್ಕಲಕೋಟ, ಚಂದ್ರಶೇಖರ ಕೌಟಗಿಮಠ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ನಾಯ್ಕರ, ಮಲ್ಲಯ್ಯ ಮೂಗನೂರಮಠ ಉಪಸ್ಥಿತಿ ರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss