ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳಿನ ಹಿರಿಯ ನಟ ಅಜಿತ್ಗೆ ಅನಾರೋಗ್ಯ ಕಾಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಿಜ್ ತಿರುಮೇನಿ ನಿರ್ದೇಶನದ ವಿಡವೇಲಿ ಚಿತ್ರದ ಶೂಟಿಂಗ್ ನಡೆಸುತ್ತಿದ್ದ ಅಜಿತ್ ಏಕಾಏಕಿ ಅನಾರೋಗ್ಯಕ್ಕೆ ಒಳಗಾಗಿ ಆಸ್ಪತ್ರೆ ಸೇರಿದ್ದು, ಅಭಿಮಾನಿಗಳು ಆತಂಕದಲ್ಲಿದ್ದಾರೆ.
ಚಿತ್ರೀಕರಣಕ್ಕಾಗಿ ಇಡೀ ಟೀಂ ಅಜರ್ಬೈಜಾನ್ಗೆ ಹೊರಟಿತ್ತು. ಆದರೆ ಅಜಿತ್ ಅನಾರೋಗ್ಯದ ಹಿನ್ನಲೆ ಶೂಟ್ ಕ್ಯಾನ್ಸಲ್ ಮಾಡಲಾಗಿದೆ. ಸದ್ಯ ಅವರ ಆರೋಗ್ಯ ಸುಧಾರಿಸಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.