ಹೈ-ಸ್ಪೀಡ್‌ ರೇಸಿಂಗ್‌ ಅಭ್ಯಾಸದ ಸಮಯದಲ್ಲಿ ನಟ ಅಜಿತ್‌ ಕಾರು ಅಪಘಾತ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಹೈ-ಸ್ಪೀಡ್ ರೇಸಿಂಗ್ ಅಭ್ಯಾಸದ ಸಮಯದಲ್ಲಿ ನಟ ಅಜಿತ್ ಕುಮಾರ್‌ ಅವರ ಕಾರು ಅಪಘಾತಕ್ಕೀಡಾಗಿದೆ.

ಮುಂಬರುವ 24H ದುಬೈ 2025 ರೇಸಿಂಗ್ ಅಭ್ಯಾಸದ ಸಮಯದಲ್ಲಿ ಈ ಘಟನೆ ನಡೆದಿದೆ. ಅಪಘಾತ ದೃಶ್ಯದ ವೀಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಅಜಿತ್‌ ಅವರ ಕಾರು ನಿಲುಗಡೆಗೆ ಬರುವ ಮೊದಲು ನಿಯಂತ್ರಣ ಕಳೆದುಕೊಂಡು ಗೋಡೆಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಅವರನ್ನು ರಕ್ಷಿಸಲು ಕೆಲವರು ಧಾವಿಸಿದ್ದರು. ಯಾವುದೇ ಅಪಾಯವಾಗದೇ ನಟ ಕಾರಿನಿಂದ ಹೊರಬಂದಿದ್ದಾರೆ.

ಅಜಿತ್, ಮ್ಯಾಥ್ಯೂ ಡೆಟ್ರಿ, ಫ್ಯಾಬಿಯನ್ ಡಫಿಯಕ್ಸ್ ಮತ್ತು ಕ್ಯಾಮೆರಾನ್ ಮೆಕ್ಲಿಯೋಡ್ ಅವರನ್ನು ಒಳಗೊಂಡ ತಂಡವು ‘ಪೋರ್ಷೆ 992’ನಲ್ಲಿ ಸ್ಪರ್ಧಿಸುತ್ತಿದೆ. ಇದು ಈವೆಂಟ್‌ನಲ್ಲಿ ಅತ್ಯಂತ ಸ್ಪರ್ಧಾತ್ಮಕ ವಿಭಾಗಗಳಲ್ಲಿ ಒಂದಾಗಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!