ಹೊಸದಿಗಂತ ಡಿಜಿಟಲ್ ಡೆಸ್ಕ್:
ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ನಡೆದ ಭೀಕರ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಐಕಾನ್ ಸ್ಟಾರ್ ಅಲ್ಲು ಅರ್ಜುನ್‌ಗೆ ಸಂಕಷ್ಟ ಎದುರಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಹೈದರಾಬಾದ್‌ನ ನಾಂಪಲ್ಲಿ ನ್ಯಾಯಾಲಯವು ನಟನಿಗೆ ಸಮನ್ಸ್ ಜಾರಿ ಮಾಡಿದ್ದು, ಜೂನ್ 22ರ ಸೋಮವಾರದಂದು ವಿಚಾರಣೆಗೆ ಖುದ್ದಾಗಿ ಹಾಜರಾಗುವಂತೆ ಕಟ್ಟುನಿಟ್ಟಿನ ಆದೇಶ ನೀಡಿದೆ.
11ನೇ ಆರೋಪಿಯಾದ ಐಕಾನ್ ಸ್ಟಾರ್
ಚಿಕ್ಕದಪಲ್ಲಿ ಪೊಲೀಸರು ದಾಖಲಿಸಿರುವ ಈ ಪ್ರಕರಣದಲ್ಲಿ ನಟ ಅಲ್ಲು ಅರ್ಜುನ್ ಅವರನ್ನು 11 ನೇ ಆರೋಪಿಯನ್ನಾಗಿ (A11) ಹೆಸರಿಸಲಾಗಿದೆ. ಸಿನಿಮಾ ಪ್ರಮೋಷನ್ ವೇಳೆ ನಿಯಮ ಉಲ್ಲಂಘನೆ ಮತ್ತು ಸೂಕ್ತ ಮುನ್ನೆಚ್ಚರಿಕೆ ವಹಿಸದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ.
ಥಿಯೇಟರ್ ಮ್ಯಾನೇಜ್‌ಮೆಂಟ್ ಮುಂಚೂಣಿಯಲ್ಲಿ
ಈ ದುರಂತಕ್ಕೆ ಕಾರಣವಾದ ಸಂಧ್ಯಾ ಥಿಯೇಟರ್‌ನ ಆಡಳಿತ ಮಂಡಳಿಯ ನಿರ್ಲಕ್ಷ್ಯದ ವಿರುದ್ಧವೂ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಪ್ರಕರಣದ ಎಫ್‌ಐಆರ್‌ನಲ್ಲಿ ಥಿಯೇಟರ್ ಮ್ಯಾನೇಜ್‌ಮೆಂಟ್ ಅನ್ನು 1 ರಿಂದ 10 ನೇ ಆರೋಪಿಗಳ ಪಟ್ಟಿಯಲ್ಲಿ ಸೇರಿಸಲಾಗಿದೆ. ಸದ್ಯ ಜೂನ್ 22ರ ಕೋರ್ಟ್ ವಿಚಾರಣೆ ಇಡೀ ಟಾಲಿವುಡ್‌ನಲ್ಲಿ ತೀವ್ರ ಕುತೂಹಲ ಮೂಡಿಸಿದೆ.



