BREAKING | ನಟ ಅಮಿತಾಬ್ ಬಚ್ಚನ್‌ಗೆ ಅನಾರೋಗ್ಯ, ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಟ ಅಮಿತಾಬ್ ಬಚ್ಚನ್‌ಗೆ ಅನಾರೋಗ್ಯ ಎದುರಾಗಿದ್ದು, ಮುಂಬೈನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಂಜಿಯೋಪ್ಲಾಸ್ಟಿ ಚಿಕಿತ್ಸೆಗೆಂದು ಅಮಿತಾಬ್ ಬಚ್ಚನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಹಿಂದೆ ಕೂಡ ಒಮ್ಮೆ ಆಂಜಿಯೋಪ್ಲಾಸ್ಟಿ ಸರ್ಜರಿ ಮಾಡಲಾಗಿದೆ. ಇದೀಗ ಮತ್ತೊಮ್ಮೆ ಶಸ್ತ್ರಚಿಕಿತ್ಸೆ ಎಂದು ಹೇಳಲಾಗಿದೆ.

ಇದರಿಂದ ಅಭಿಮಾನಿಗಳು ಆತಂಕಕ್ಕೀಡಾಗಿದ್ದಾರೆ. ಕೆಲ ದಿನಗಳ ಹಿಂದಷ್ಟೆ ಜಯ ಬಚ್ಚನ್ ಅವರು ಅಮಿತಾಬ್ ಆರೋಗ್ಯ ಸ್ಥಿತಿ ಬಗ್ಗೆ ಮಾಹಿತಿ ನೀಡಿದ್ದರು. ಅವರಿಗೆ ಕಷ್ಟದ ಸಮಯ ಎಂದು ಹೇಳಿಕೊಂಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!