ನಟ ಚೇತನ್‌ ಗೆ 14 ದಿನಗಳ ನ್ಯಾಯಾಂಗ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಸಾಮಾಜಿಕ ಜಾಲತಾಣದಲ್ಲಿ ಹೈ ಕೋರ್ಟ್‌ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್‌ ಅವರ ವಿರುದ್ಧ ಆಕ್ಷೇಪಾರ್ಹ ಪೋಸ್ಟ್‌ ಮಾಡಿದ ಆರೋಪದಡಿ ನಟ ಚೇತನ್‌ ರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನ್ಯಾಯಾಲಯ ಆದೇಶಿಸಿದೆ.
ಮಂಗಳವಾರ ಶೇಷಾದ್ರಿಪುರಂ ಠಾಣಾ ಪೊಲೀಸರು ಚೇತನ್‌ ರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಬಳಿಕ ಕೋರಮಂಗಲದ ನ್ಯಾಷನಲ್‌ ಗೇಮ್ಸ್‌ ವಿಲೇಜ್‌ ನಲ್ಲಿರುವ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದು, 8ನೇ ಎಸಿಎಂಎಂ ನ್ಯಾಯಾಲಯ ಚೇತನ್‌ ಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಆದೇಶ ಹೊರಡಿಸಿದೆ.
ಇದಕ್ಕೆ ಪ್ರತಿಯಾಗಿ ಚೇತನ್‌ ಪರ ವಕೀಲರು ಇಂದು ಆಕ್ಷೇಪಣೆ ಅರ್ಜಿ ಸಲ್ಲಿಸಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!