ನಟ ಚೇತನ್ ಗೆ ಜಾಮೀನು ಮಂಜೂರು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ನಟ ಚೇತನ್ ಗೆ 32ನೇ ಎಸಿಎಂಎಂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇಪ್ಪತ್ತೈದು ಸಾವಿರ ರೂಪಾಯಿ ವೈಯಕ್ತಿಕ ಬಾಂಡ್ ಮತ್ತು ಒಬ್ಬರ ಭದ್ರತೆ ನೀಡುವಂತೆ ನ್ಯಾಯಾಧೀಶೆ ಲತಾ ಅವರು ಆದೇಶಿಸಿದ್ದಾರೆ.

ಆಕ್ಷೇಪಾರ್ಹ ಟ್ವೀಟ್ ಮಾಡಿದ್ದಾರೆ ಎನ್ನುವ ಕಾರಣಕ್ಕಾಗಿ ಎರಡು ದಿನಗಳ ಹಿಂದೆ ನಟ ಚೇತನ್ ನನ್ನು (Chetan) ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸರು ಬಂಧಿಸಿದ್ದರು. ಪೊಲೀಸರು ಹಾಕಿರುವ ಎಫ್‍ ಐಆರ್ ಆಧರಿಸಿ ನ್ಯಾಯಾಲಯವು ಚೇತನ್ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಕಳುಹಿಸಿತ್ತು.

ಚೇತನ್ ಅವರು ಉರಿಗೌಡ (Urigowda), ನಂಜೇಗೌಡ (Nanjegowda) ವಿಚಾರವಾಗಿ ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದರು. ಈ ಕುರಿತು ಶಿವಕುಮಾರ್ (Shivakumar) ಎನ್ನುವವರು ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!