ದಿಗಂತ ವರದಿ ವಿಜಯಪುರ:
ನಟ ಚೇತನ ಮುಸ್ಲಿಂರ ಏಜೆಂಟ್ ಆಗಿದ್ದಾರೆ. ಮುಸ್ಲಿಂರು ರೊಕ್ಕಾ ಕೊಟ್ಟು ಇಂತಹ ಅಯೋಗ್ಯ ಕೆಲಸ ಮಾಡಿಸುತ್ತಾರೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಕಿಡಿಕಾರಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಹಿಂದುತ್ವ ಹೆಸರು ಹೇಳಿ ರಾತ್ರಿ ಹಿಂದೂ ವಿರೋಧಿ ಕೆಲಸ ಮಾಡುತ್ತಾರೆ ಎಂದು ದೂರಿದರು.
ಇನ್ನು ದೈವಾರಾಧನೆ ನಮ್ಮ ಸಂಸ್ಕೃತಿಯ ಭಾಗವಾಗಿದೆ. ನಮ್ಮ ಆರಾಧನೆ ಬಗ್ಗೆ ಮಾತನಾಡುವವರಿಗೆ ದೇವರು ಶಿಕ್ಷೆ ನೀಡುತ್ತಾನೆ ಎಂದರು.