Friday, July 1, 2022

Latest Posts

ಬ್ರಾಹ್ಮಣ ಸಮುದಾಯದ ವಿರುದ್ಧ ನಟ ಚೇತನ್ ಹೇಳಿಕೆ: ಕಠಿಣ ಕ್ರಮಕ್ಕೆ ಸಚಿವ ಶಿವರಾಮ ಹೆಬ್ಬಾರ್ ಒತ್ತಾಯ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಬ್ರಾಹ್ಮಣ ಸಮುದಾಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳಕಾರಿ ಹೇಳಿಕೆ ನೀಡಿದ್ದ ನಟ ಚೇತನ್ ವಿರುದ್ಧ  ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಆಕ್ರೋಶ ವ್ಯಕ್ತಪಡಿಸಿದ್ದು, ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕನ್ನಡ ಚಿತ್ರರಂಗಗಳಲ್ಲಿ ನಟಿಸುತ್ತಿರುವ ಚೇತನ್ ಎನ್ನುವ ವ್ಯಕ್ತಿಯೊಬ್ಬ ಸಾಮಾಜಿಕ ಜಾಲತಾಣಗಳಲ್ಲಿ ಬ್ರಾಹ್ಮಣರ ವಿರುದ್ಧವಾಗಿ ಅವಹೇಳನಕಾರಿಯಾಗಿ, ಪ್ರಚೋದನಕಾರಿಯಾಗಿ ಮಾತಾಡಿರುವುದು ಗಮನಕ್ಕೆ ಬಂದಿತು. ಮೊದಲಿಗೆ, ಆತನ ಹೇಳಿಕೆಗಳನ್ನು ತೀವ್ರವಾಗಿ ಖಂಡಿಸುತ್ತೇನೆ.

ಇನ್ನು, ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಪ್ರತಿಯೊಂದು ಧರ್ಮ, ಜಾತಿಗಳಿಗೆ ಸ್ಥಾನಮಾನ ನೀಡಿದ್ದಾರೆ. ಈ ವ್ಯಕ್ತಿಯ ಹೇಳಿಕೆ ಸಂವಿಧಾನಕ್ಕೆ ವಿರೋಧವಾದುದು ಮತ್ತು ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರಿಗೆ ಅವಮಾನ ಮಾಡುವಂತಹದು. ಸಮಾಜದಲ್ಲಿ ತಾನು ಗುರುತಿಸಿಕೊಳ್ಳಬೇಕು ಅಂತಲೋ, ಗಂಜೀ ಕಾಸಿನ ಆಸೆಗೋ ಹೇಳಿಕೆ ಕೊಡೋ ಇಂತಹ ಸಮಾಜ ಕಂಟಕರನ್ನು ಕಾನೂನಿನ ಚೌಕಟ್ಟಿನಲ್ಲಿ ಬಂಧಿಸಿ, ಕಠಿಣ ಕ್ರಮ ಜರುಗಿಸಬೇಕೆಂದು ಮುಖ್ಯಮಂತ್ರಿ  ಬಿ. ಎಸ್. ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿಕೊಳ್ಳುತ್ತೇನೆ ಎಂದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss