ನಟ ಚಿರಂಜೀವಿಗೆ ಒಲಿದ ವರ್ಷದ ವ್ಯಕ್ತಿ ಪ್ರಶಸ್ತಿ: ಪ್ರಧಾನಿ ಮೋದಿ ಅಭಿನಂದನೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

2022ನೇ ಸಾಲಿನ ‘ಭಾರತೀಯ ಚಲನಚಿತ್ರ ವರ್ಷದ ವ್ಯಕ್ತಿ’ ಪ್ರಶಸ್ತಿಗೆ ತೆಲುಗು ನಟ ಮೆಗಾ ಸ್ಟಾರ್​ ಚಿರಂಜೀವಿ ಭಾಜನರಾಗಿದ್ದು, ಅವರ ಅಭಿಮಾನಿಗಳ ಜೊತೆ ಪ್ರಧಾನಿ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ.

ಟ್ವೀಟ್​ ಮೂಲಕ ಅಭಿನಂದನೆ ತಿಳಿಸಿದ ಪ್ರಧಾನಿ ಮೋದಿ, ‘ಜಿರಂಜೀವಿ ಅವರದ್ದು ಗಮನಾರ್ಹ ವ್ಯಕ್ತಿತ್ವ. ಅಗಾಧವಾದ ಕೆಲಸ, ವಿಭಿನ್ನವಾದ ಪಾತ್ರಗಳು ಹಾಗೂ ಅದ್ಭುತ ವ್ಯಕ್ತಿತ್ವದ ಕಾರಣದಿಂದಾಗಿ ಹಲವು ಪೀಳಿಗೆಯ ಅಭಿಮಾನಿಗಳು ಅವರನ್ನು ಪ್ರೀತಿಸುತ್ತಾರೆ. 2022ನೇ ಸಾಲಿನ ಭಾರತೀಯ ಸಿನಿಮಾ ವ್ಯಕ್ತಿ ಪ್ರಶಸ್ತಿಗೆ ಭಾಜನವಾಗಿರುವ ಚಿರಂಜೀವಿ ಅವರಿಗೆ ಅಭಿನಂದನೆಗಳು’ ಎಂದು ಹೇಳಿದ್ದಾರೆ.

 

ಗೋವಾದಲ್ಲಿ ನಡೆದ 53ನೇ ಅಂತಾರಾಷ್ಟ್ರೀಯ ಭಾರತೀಯ ಸಿನಿಮೋತ್ಸವದಲ್ಲಿ ಚಿರಂಜೀವಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಪದ್ಮ ಭೂಷಣ, ನಂದಿ ಪ್ರಶಸ್ತಿ, ಫಿಲ್ಮ್​ ಫೇರ್​ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳು ಈಗಾಗಲೇ ಚಿರಂಜೀವಿ ಅವರ ಮುಡಿಗೇರಿವೆ. ಈಗ 2022ನೇ ಸಾಲಿನ ‘ಭಾರತೀಯ ಚಲನಚಿತ್ರ ವರ್ಷದ ವ್ಯಕ್ತಿ’ ಪ್ರಶಸ್ತಿಗೆ ಅವರು ಭಾಜನರಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!