ಹೊಸದಿಗಂತ ಡಿಜಿಟಲ್ ಡೆಸ್ಕ್:
ಸ್ಯಾಂಡಲ್‌ವುಡ್ ಡಾರ್ಲಿಂಗ್ ಕೃಷ್ಣ , ನಟಿ ಮಿಲನಾ ದಂಪತಿ ಫ್ಯಾಮಿಲಿ ಕೋರ್ಟ್‌ನಲ್ಲಿ ಕಾಣಿಸಿಕೊಂಡಿದ್ದು, ಈ ಬಗ್ಗೆ ನಾನಾ ರೀತಿಯ ಗಾಸಿಪ್ ಸೋಶಿಯಲ್ ಮಿಡಿಯಾದಲ್ಲಿ ಹರಿದಾಡುತ್ತಿದೆ.
ಸದ್ಯ ನಟ ಡಾರ್ಲಿಂಗ್ ಕೃಷ್ಣ ‘ಲವ್ ಮಾಕ್ಟೇಲ್ 3’ ಸಿನಿಮಾದ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆ ಇತ್ತೀಚೆಗಷ್ಟೆ ಅವರು ಫ್ಯಾಮಿಲಿ ಕೋರ್ಟ್‌ನಲ್ಲಿ ಕಾಣಿಸಿಕೊಂಡಿದ್ದಾರೆ.
ಬೆಂಗಳೂರಿನ ಫ್ಯಾಮಿಲಿ ಕೋರ್ಟ್‌ನಲ್ಲಿರುವ ಅವರ ಫೋಟೊ ಕಂಡು ಅಭಿಮಾನಿಗಳು ಶಾಕ್ ಆಗಿದ್ದಾರೆ. ಮಿಲನಾ ಹಾಗೂ ಡಾರ್ಲಿಂಗ್ ಕೃಷ್ಣ ಪ್ರೀತಿಸಿ ವಿವಾಹವಾಗಿದ್ದು ಅವರ ನಡುವೆ ವೈಮನಸ್ಸು ಮೂಡಿದೆಯಾ ಎಂದು ಅಭಿಮಾನಿಗಳು ಆತಂಕಗೊಂಡಿದ್ದಾರೆ. ಹೀಗಾಗಿ ಈ ಸುದ್ದಿ ಚರ್ಚೆಗೆ ಎಡೆ ಮಾಡಿಕೊಟ್ಟಿದೆ.
ಅವರಿಬ್ಬರು ಕ್ಯಾಮರಾ ಕಣ್ಣಿಗೆ ಬೀಳದಂತೆ ಕದ್ದು ಮುಚ್ಚಿ ಕೋರ್ಟ್ ಗೆ ಬಂದಿದ್ದು ಅನುಮಾನಕ್ಕೆ ಎಡೆ ಮಾಡಿ ಕೊಟ್ಟಿದೆ. ಅವರಿಬ್ಬರು ಡಿವೊರ್ಸ್ ನೀಡುತ್ತಿದ್ದಾರಾ ಅಥವಾ ಕುಟುಂಬದಲ್ಲಿ ಏನಾದರು ಸಮಸ್ಯೆ ಇದೆಯಾ? ಎಂಬ ಪ್ರಶ್ನೆ ಎದುರಾಗಿದ್ದು ಅಭಿಮಾನಿಗಳಿಗೆ ಹೊಸ ಗೊಂದಲವನ್ನು ಉಂಟು ಮಾಡಿದೆ. ಈ ಬಗ್ಗೆ ದಂಪತಿ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿಲ್ಲ.