ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಜೈಲಿನಲ್ಲಿ ನಟ ದರ್ಶನ್ ಗೆ ಕನಿಷ್ಠ ಸವಲತ್ತು ನೀಡದ ಆರೋಪಕ್ಕೆ ಸಂಬಂಧಿಸಿದಂತೆ ಅರ್ಜಿ ಅಂಗೀಕರಿಸಿರುವ ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯವು, ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ, ಪರಿಶೀಲಿಸುವಂತೆ ಆದೇಶಿಸಿದೆ.
ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ ಸವಲತ್ತು ಪರಿಶೀಲಿಸಬೇಕು. ಕೋರ್ಟ್ ಆದೇಶ ಪಾಲನೆಯಾಗಿದೆಯೋ ಇಲ್ಲವೋ ಎಂದು ಪರಿಶೀಲಿಸಬೇಕು . ಜೈಲು ಕೈಪಿಡಿಯಂತೆ ಸವಲತ್ತು ನೀಡಲಾಗಿದೆಯೇ ಎಂದು ಪರಿಶೀಲನೆ ನಡೆಸುವಂತೆ 57ನೇ ಸಿಸಿಎಚ್ ಕೋರ್ಟ್ ಆದೇಶ ನೀಡಿದೆ. ಅಕ್ಟೋಬರ್ 18 ರೊಳಗೆ ಭೇಟಿ ನೀಡಿ ವರದಿ ನೀಡಲು ಸೂಚನೆ ನೀಡಲಾಗಿದೆ.
ಕೋರ್ಟ್ ಆದೇಶದಂತೆ ಸೌಲಭ್ಯ ನೀಡಲಾಗಿದೆ ಎಂದು ಜೈಲು ಅಧಿಕಾರಿಗಳು ಹೇಳಿದ್ದಾರೆ. ಆದ್ರೆ, ಜೈಲಿನಲ್ಲಿ ಕನಿಷ್ಠ ಸೌಲಭ್ಯ ನೀಡಿಲ್ಲ ಎಂದು ದರ್ಶನ್ ಪರ ವಕೀಲರು ಆರೋಪ ಮಾಡಿದ್ದಾರೆ. ಈ ಸಂಬಂಧ ನ್ಯಾಯಾಧೀಶರೇ ಪರಿಶೀಲಿಸಲು ನಟ ದರ್ಶನ್ ಕೋರ್ಟ್ ಗೆ ಮನವಿ ಮಾಡಿದ್ದರು.
ಹೀಗಾಗಿ ಕೋರ್ಟ್ , ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದು ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ ಸವಲತ್ತು ಪರಿಶೀಲಿಸುವಂತೆ ಸೂಚಿಸಿದೆ.