ಹೊಸದಿಗಂತ ಡಿಜಿಟಲ್ ಡೆಸ್ಕ್:
6 ತಿಂಗಳ ಬಳಿಕ ನಟ ದರ್ಶನ್ ಮತ್ತು ಪವಿತ್ರಾ ಗೌಡ ಕೋರ್ಟ್‌ನಲ್ಲಿ ಶುಕ್ರವಾರ ಮುಖಾಮುಖಿಯಾಗಲಿದ್ದಾರೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಖುದ್ದು ಎಲ್ಲಾ ಆರೋಪಿಗಳ ಹಾಜರಾತಿಗೆ ಸೂಚನೆ ಇರುವ ಕಾರಣ ಸಿಸಿಎಚ್ 57ರ ಕೋರ್ಟ್‌ನಲ್ಲಿ ದರ್ಶನ್ ಮತ್ತು ಪವಿತ್ರಾ ಗೌಡ ಮುಖಾಮುಖಿಯಾಗಲಿದ್ದಾರೆ.
ಜಾಮೀನು ನೀಡುವ ಸಮಯದಲ್ಲಿ ಪ್ರತಿ ತಿಂಗಳು ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರಾಗಬೇಕು ಎಂದು ಷರತ್ತು ವಿಧಿಸಿತ್ತು. ಆದರಂತೆ ಶುಕ್ರವಾರ ಎಲ್ಲಾ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ.
ಜಾಮೀನು ಸಿಕ್ಕಿದರೂ ಇಲ್ಲಿಯವರೆಗೆ ಪವಿತ್ರಾಗೌಡ- ದರ್ಶನ್ ಭೇಟಿಯಾಗಿಲ್ಲ. ಈ ಹಿಂದೆ ಕೋರ್ಟ್ ವಿಚಾರಣೆಯ ಸಮಯದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮುಖಾಮುಖಿಯಾಗಿದ್ದೇ ಕೊನೆ. ಅದಾದ ಬಳಿಕ ದರ್ಶನ್ ಹಾಗೂ ಪವಿತ್ರಾ ದೂರವಾಗಿದ್ದರು.