ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅರೆಸ್ಟ್ ಆಗಿದ್ದಾರೆ. ಇದೀಗ ರೇಣುಕಾಸ್ವಾಮಿ ಕೊಲೆಗೆ ದರ್ಶನ್ ಪತ್ನಿ ಫಸ್ಟ್ ರಿಯಾಕ್ಷನ್ ಕೊಟ್ಟಿದ್ದಾರೆ.
ದರ್ಶನ್ ಅರೆಸ್ಟ್ ಆದ ಬಳಿಕ ವಿಜಯಲಕ್ಷ್ಮಿ ಸೈಲೆಂಟ್ ಆಗಿದ್ರೂ ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಳಿಕೆ ಕೂಡ ಪೊಲೀಸರು ಪಡೆದುಕೊಂಡಿದ್ದಾರೆ. ಈ ಬೆನ್ನಲ್ಲೇ ಸೋಷಿಯಲ್ ಮೀಡಿಯಾದಲ್ಲಿ ಮೃತ ರೇಣುಕಾಸ್ವಾಮಿಗೆ ಸಂತಾಪ ಸೂಚಿಸಿದ್ದಾರೆ.
ಈ ವೇಳೆ ಕೆಲವು ಪ್ರಮುಖ ವಿಚಾರಗಳನ್ನು ಅವರು ತಿಳಿಸಿದ್ದಾರೆ. ದರ್ಶನ್ ಹಾಗೂ ಅವರ ಕುಟುಂಬದವರಿಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಸುಳ್ಳು ಸುದ್ದಿ ಹರಡದಂತೆ ಅವರು ಕೋರ್ಟ್ನಿಂದ ತಡೆಯಾಜ್ಞೆ ತಂದಿದ್ದಾರೆ. ಆ ಬಗ್ಗೆಯೂ ವಿಜಯಲಕ್ಷ್ಮಿ ಅವರು ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಅಧಿಕಾರಿಗಳು ನೀಡುವ ಅಧಿಕೃತ ಮಾಹಿತಿಯನ್ನು ಮಾತ್ರ ಪ್ರಸಾರ ಮಾಡಬೇಕು ಎಂದು ನಾನು ಎಲ್ಲರನ್ನೂ ಒತ್ತಾಯಿಸುತ್ತೇನೆ. ಚಾಮುಂಡೇಶ್ವರಿ ತಾಯಿ ಬಗ್ಗೆ ಮತ್ತು ನಮ್ಮ ಕಾನೂನಿನ ಬಗ್ಗೆ ನನಗೆ ಸಂಪೂರ್ಣ ನಂಬಿಕೆ ಇದೆ. ನ್ಯಾಯಕ್ಕೆ ಜಯ ಸಿಗಲಿ. ಸತ್ಯಮೇವ ಜಯತೆ’ ಎಂದು ವಿಜಯಲಕ್ಷ್ಮಿ ಅವರು ಪೋಸ್ಟ್ ಮಾಡಿದ್ದಾರೆ. ಇದರ ಜೊತೆಗೆ ನ್ಯಾಯಾಲಯದ ಆದೇಶಪ್ರತಿಯನ್ನು ಅವರು ಶೇರ್ ಮಾಡಿಕೊಂಡಿದ್ದಾರೆ.