ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲಾ ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ. ಈ ಹಿನ್ನೆಲೆ ದರ್ಶನ್ಗೆ ಜೈಲಿನಲ್ಲಿ ವಿಐಪಿ ಟ್ರೀಟ್ಮೆಂಟ್ ಕೊಟ್ಟರೆ ಹುಷಾರ್ ಎಂದು ಜೈಲಾಧಿಕಾರಿಗಳಿಗೆ ಸುಪ್ರೀಂ ಎಚ್ಚರಿಕೆ ಕೊಟ್ಟಿದೆ.
ಆರೋಪಿಗಳಿಗೆ 5 ಸ್ಟಾರ್ ಟ್ರೀಟ್ಮೆಂಟ್ ನೀಡಲಾಗುತ್ತಿದೆ ಎಂದು ನಮಗೆ ತಿಳಿದ ದಿನ, ಮೊದಲ ಹೆಜ್ಜೆಯೇ ಸೂಪರಿಂಟೆಂಡೆಂಟ್ ಮತ್ತು ಇತರ ಎಲ್ಲ ಅಧಿಕಾರಿಗಳನ್ನು ಅಮಾನತುಗೊಳಿಸುವುದು. ರಾಜ್ಯ ಸರ್ಕಾರ ಯಾರಿಗಾದರೂ ವಿಐಪಿ ಟ್ರೀಟ್ಮೆಂಟ್ ನೀಡುತ್ತಿರುವ ಛಾಯಾಚಿತ್ರಗಳು ಅಥವಾ ಯಾವುದೇ ವೀಡಿಯೊವನ್ನು ನಾವು ನೋಡಿದರೆ ಮೊದಲು ನಿಮ್ಮನ್ನು ಸಸ್ಪೆಂಡ್ ಮಾಡಲಾಗುತ್ತದೆ ಎಂದು ಕೋರ್ಟ್ ಖಡಕ್ ವಾರ್ನಿಂಗ್ ನೀಡಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್, ಪವಿತ್ರಾಗೌಡ ಸೇರಿದಂತೆ ಎಲ್ಲಾ ಆರೋಪಿಗಳ ಜಾಮೀನು ರದ್ದುಗೊಳಿಸಿ ಸುಪ್ರೀಂ ಆದೇಶಿಸಿದ್ದು, ಕೂಡಲೇ ಎಲ್ಲಾ ಆರೋಪಿಗಳು ಶರಣಾಗಬೇಕು ಎಂದು ಸೂಚಿಸಿದೆ. ಶರಣಾಗದಿದ್ದರೇ ಕೂಡಲೇ ವಶಕ್ಕೆ ಪಡೆಯುವಂತೆ ಪೊಲೀಸರಿಗೆ ಕೋರ್ಟ್ ಸೂಚಿಸಿದೆ. ಈ ತೀರ್ಪಿನ ಪ್ರತಿಯನ್ನು ಎಲ್ಲಾ ಹೈಕೋರ್ಟ್ಗಳು ಮತ್ತು ರಾಜ್ಯ ಸರ್ಕಾರಗಳಿಗೆ ನೀಡುವಂತೆ ರಿಜಿಸ್ಟ್ರಿಗೆ ನಿರ್ದೇಶಿಸಲಾಗಿದೆ.