ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆನ್ನು ನೋವಿನ ಶಸ್ತ್ರಚಿಕಿತ್ಸೆ ನೆಪದಲ್ಲಿ ಮಧ್ಯಂತರ ಜಾಮೀನು ಪಡೆದು ಏಳು ವಾರಗಳ ಬಳಿಕ ಯಾವುದೇ ಶಸ್ತ್ರ ಚಿಕಿತ್ಸೆ ಇಲ್ಲದೆ ಬಿಜಿಎಸ್ ಆಸ್ಪತ್ರೆಯಿಂದ ನಟ ದರ್ಶನ್ ಡಿಸ್ಚಾರ್ಜ್ ಆಗಿದ್ದಾರೆ.
ಅಕ್ಟೋಬರ್ 31ರಂದು ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್‌ಗೆ ಹೈಕೋರ್ಟ್ ಆರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು.
ಜಾಮೀನಿನ ಮೇಲೆ ಬಿಡುಗಡೆಯಾದ ಕೆಲ ದಿನಗಳ ನಂತರ ದರ್ಶನ್ ಆಸ್ಪತ್ರೆಗೆ ದಾಖಲಾಗಿ ಫಿಸಿಯೋಥೆರಪಿಗೆ ಒಳಗಾಗಿದ್ದರು. ಇದೀಗ ಚಿಕಿತ್ಸೆ ಪಡೆಯದೇ ದರ್ಶನ್ ಡಿಸ್ಚಾರ್ಜ್ ಆಗಿದ್ದಾರೆ.