ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆನ್ನು ನೋವಿನಿಂದಾಗಿ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿರುವ ನಟ ದರ್ಶನ್ ಇಂದು ಡಿಸ್ಚಾರ್ಜ್ ಆಗುವ ನಿರೀಕ್ಷೆ ಇದೆ. ಬೆನ್ನು ನೋವಿನ ಕಾರಣ ಶಸ್ತ್ರ ಚಿಕಿತ್ಸೆ ಮಾಡದೆ 49 ದಿನಗಳ ನಂತರ ದರ್ಶನ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ.
ದರ್ಶನ್ ಅವರ ಬೆನ್ನು ನೋವಿಗೆ ಫಿಸಿಯೋಥೆರಪಿ ಮೂಲಕ ಚಿಕಿತ್ಸೆ ನೀಡಲು ಕುಟುಂಬ ಯೋಜಿಸಿದ್ದು, ದರ್ಶನ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ. ಆಸ್ಪತ್ರೆ ವೆಚ್ಚ ಸೇರಿದಂತೆ ಎಲ್ಲಾ ಪ್ರಕ್ರಿಯೆಗಳು ಮುಗಿದ ಬಳಿಕ ಡಿಸ್ಚಾರ್ಜ್ ಮಾಡುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.
ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಂತರ ಹೊಸಕೆರೆಹಳ್ಳಿಯಲ್ಲಿರುವ ಪತ್ನಿ ವಿಜಯಲಕ್ಷ್ಮಿ ನಿವಾಸಕ್ಕೆ ದರ್ಶನ್ ತೆರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.