ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಗೆ ಬೆನ್ನುನೋವು ಕಾಣಿಸಿಕೊಂಡಿತ್ತು. ಈ ಹಿನ್ನಲೆಯಲ್ಲಿ ಚಿಕಿತ್ಸೆಗಾಗಿ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಜೈಲು ಅಧಿಕಾರಿಗಳು ಕರೆತಂದಿದ್ದಾರೆ.
ಬಳ್ಳಾರಿಯ ಕೇಂದ್ರ ಕಾರಾಗೃಹದಿಂತ ವಾಹನದಲ್ಲಿ ವಿಮ್ಸ್ ಆಸ್ಪತ್ರೆಗೆ ಜೈಲು ಅಧಿಕಾರಿಗಳು ನಟ ದರ್ಶನ್ ಅವರನ್ನು ಕರೆತಂದಿದ್ದಾರೆ. ವಿಮ್ಸ್ ಆಸ್ಪತ್ರೆಯ ನ್ಯೂರೋ ವಿಭಾಗದಲ್ಲಿ ನಟ ದರ್ಶನ್ ಅವರಿಗೆ ಎಂಆರ್ ಐ ಸ್ಕ್ಯಾನಿಂಗ್ ನಡೆಸಲಿದ್ದಾರೆ.