ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ ದರ್ಶನ್ ಮನೆಯೂಟ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಏಕಸದಸ್ಯ ಪೀಠ ಆ.20ಕ್ಕೆ ಮುಂದೂಡಿದೆ.
ಹೀಗಾಗಿ ಇನ್ನೂ 21 ದಿನ ದರ್ಶನ್‌ಗೆ ಜೈಲೂಟವೇ ಗತಿಯಾಗಿದೆ. ಹೈಕೋರ್ಟ್ ನ್ಯಾ. ನಾಗಪ್ರಸನ್ನ ಅವರಿದ್ದ ಪೀಠ ಅರ್ಜಿ ವಿಚಾರಣೆ ನಡೆಸಿದ್ದು, ಸರ್ಕಾರ ಮತ್ತು ಪೊಲೀಸರಿಗೆ ಆಕ್ಷೇಪಣೆ ಸಲ್ಲಿಸಲು ಸೂಚಿಸಿ, ಅರ್ಜಿ ವಿಚಾರಣೆಯನ್ನು ಮುಂದೂಡಿದೆ.
ಮ್ಯಾಜಿಸ್ಟ್ರೇಟ್ ಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಹೈಕೋರ್ಟ್‌ನಲ್ಲಿ ನಡೆದಿದ್ದು, ದರ್ಶನ್ ಪರ ಹಿರಿಯ ವಕೀಲ ಪ್ರಭುಲಿಂಗ ನಾವದಗಿ ವಾದ ಮಂಡಿಸಿದರು. ಕರ್ನಾಟಕ ಕಾರಾಗೃಹಗಳ ಕಾಯ್ದೆ ಓದುತ್ತಾ ವಾದ ಮಂಡಿಸಿದ ಪ್ರಭುಲಿಂಗ ನಾವದಗಿ ಅವರು, ಮ್ಯಾನ್ಯುವಲ್ ಪ್ರಕಾರ ವಿಚಾರಣಾಧೀನ ಕೈದಿಗೆ ಸ್ವಂತ ಖರ್ಚಿನಲ್ಲಿ ಖಾಸಗಿ ಊಟ ಪಡೆಯೋದಕ್ಕೆ ಅವಕಾಶ ಇದೆ. ಅಧೀನ ನ್ಯಾಯಾಲಯ ಇಲ್ಲಿ ಆ್ಯಕ್ಟ್‌ಗಿಂತ ಮ್ಯಾನ್ಯುಯಲ್ ಬಗ್ಗೆ ಪರಿಗಣಿಸಿದೆ. ಕರ್ನಾಟಕ ಪ್ರಿಸನ್ಸ್ ಆ್ಯಕ್ಟ್ 1963 ಅನ್ನು ಪರಿಗಣಿಸಿಯೇ ಇಲ್ಲ. ಸೆಕ್ಷನ್ 30ರಡಿಯಲ್ಲಿ ಮನೆ ಊಟ ಪಡೆಯಲು ಅವಕಾಶ ಇದೆ ಎಂದು ತಿಳಿಸಿದರು.