ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್‌ಗೆ ಕಾಡುತ್ತಿದೆ ಬೆನ್ನು ನೋವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಳ್ಳಾರಿ ಜೈಲು ಪಾಲಾಗಿರುವ ದರ್ಶನ್‌ಗೆ ಬೆನ್ನು ನೋವಿನ ಸಮಸ್ಯೆ ಕಾಡುತ್ತಿದೆ. ಅನಾರೋಗ್ಯದಿಂದ ಬಳಲುತ್ತಿರುವ ನಟನಿಗೆ ಜೈಲಿನ ವೈದ್ಯರು ತಪಾಸಣೆ ನಡೆಸಿದ್ದಾರೆ.

ದರ್ಶನ್ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದರು. ತಪಾಸಣೆಯನ್ನು ಅವರು ನಿರಾಕರಿಸಿದ್ದರು. ಆದರೆ ಈಗ ಬೆನ್ನು ನೋವಿನಿಂದಾಗಿ ಮೂಳೆಯಲ್ಲಿ ಊತದ ಸಮಸ್ಯೆ ಕಾಣಿಸಿಕೊಂಡಿದೆ. ಈ ಪರಿಣಾಮ, ಸೆಂಟ್ರಲ್ ಜೈಲು ವೈದ್ಯರಿಂದ 10 ನಿಮಿಷಗಳ ಕಾಲ ದರ್ಶನ್‌ಗೆ ಆರೋಗ್ಯ ತಪಾಸಣೆ ಮಾಡಲಾಗಿದೆ.

ಸ್ಕ್ಯಾನಿಂಗ್ ಸೇರಿದಂತೆ ಇತರೆ ಚಿಕಿತ್ಸೆಗೆ ವೈದ್ಯರು ಸಲಹೆ ನೀಡಿದ್ದು, ಅದನ್ನು ದರ್ಶನ್ ನಿರಾಕರಿಸಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಹಾಗೂ ಪವಿತ್ರಾ ಗೌಡರ ಜಾಮೀನು ಅರ್ಜಿ ವಿಚಾರಣೆಯನ್ನು ಅಕ್ಟೋಬರ್ 5ಕ್ಕೆ ಮುಂದೂಡಿ ಸಿಸಿಹೆಚ್ 57ನೇ ನ್ಯಾಯಾಲಯವು ಆದೇಶ ಹೊರಡಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!