ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆಯ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಅವರಿಗೆ ಕೋರ್ಟ್, ನ್ಯಾಯಾಂಗ ಬಂಧನವನ್ನು ವಿಸ್ತರಿಸಿ ಆದೇಶ ನೀಡಿದೆ. ಜುಲೈ 18 ರವರೆಗೆ ದರ್ಶನ್ಗೆ ಪರಪ್ಪನ ಅಗ್ರಹಾರ ಜೈಲೇ ಗತಿಯಾಗಿದೆ.
ರೇಣುಕಾಸ್ವಾಮಿ ಕೊಲೆ ಕೇಸ್ನ ಪ್ರಕರಣದ ಎ2 ಆರೋಪಿ ದರ್ಶನ್ ಹಾಗೂ ಇತರೆ ಕೆಲ ಆರೋಪಿಗಳು ವಿಡಿಯೋ ಕಾನ್ಫೆರೆನ್ಸ್ ಮೂಲಕ ಕೋರ್ಟ್ಗೆ ಹಾಜರಾಗಿದ್ದರು. ಬೆಂಗಳೂರು ಮತ್ತು ತುಮಕೂರು ಜೈಲಿನಿಂದ ಆರೋಪಿಗಳನ್ನ ಹಾಜರುಪಡಿಸಲಾಗಿತ್ತು.
ಮಹಿಳಾ ಎ1 ಆರೋಪಿ ಪವಿತ್ರಾ ಗೌಡ ಪ್ರತ್ಯೇಕವಾಗಿ ಕೋರ್ಟ್ಗೆ ಹಾಜರಾಗಿದ್ದರು. ಈ ವೇಳೆ ವಿಚಾರಣೆ ನಡೆಸಿದ ಕೋರ್ಟ್ ಜುಲೈ 18ರವರೆಗೆ ದರ್ಶನ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಅಂದರೆ ಇನ್ನು 14 ದಿನಗಳ ಕಾಲ ದರ್ಶನ್ ಅವರು ಜೈಲಿನಲ್ಲೇ ಇರಬೇಕಾಗಿದೆ.