February 18, 2026
Wednesday, February 18, 2026
spot_img

ನಟ ದರ್ಶನ್‌, ಪವಿತ್ರಾ ಗೌಡ ಇಂದು ಕೋರ್ಟ್‌ಗೆ: ದೋಷಾರೋಪ ಹೊರಿಸಲಿರುವ ಕೋರ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ 17 ಆರೋಪಿಗಳು ಇಂದು ಸಿಸಿಎಚ್ 64ರ ನ್ಯಾಯಾದೀಶರ ಮುಂದೆ ಹಾಜರಾಗಲಿದ್ದಾರೆ.

ಎಲ್ಲಾ ಆರೋಪಿಗಳ ಹಾಜರಾತಿ ಬಳಿಕ ಚಾರ್ಜಸ್ ಫ್ರೇಮ್ ಪ್ರಕ್ರಿಯೆ ಶುರುವಾಗಲಿದೆ. ಆರೋಪಿ ಪವಿತ್ರಾಗೌಡ ಎಂದು ಕೂಗಿದಾಗ ಕಟಕಟೆಗೆ ಬರಬೇಕಿದೆ, ನಿಮ್ಮ ಮೇಲೆ ಐಪಿಸಿ ಸೆಕ್ಷನ್ 302 ಕೊಲೆಯತ್ನ, 364 ಕಿಡ್ನ್ಯಾಪ್, 202 ಸಾಕ್ಷಿನಾಶ ಕೇಸ್ ದಾಖಲಾಗಿದೆ. ಇದನ್ನ ನೀವು ಒಪ್ಕೊತೀರಾ ಅಥವಾ ಅಲ್ಲಗೆಳೆಯುತ್ತೀರಾ ಎಂದು ನ್ಯಾಯಾದೀಶರು ಕೇಳಲಿದ್ದಾರೆ.‌ 

ಇಲ್ಲ ಸ್ವಾಮಿ ಇದೆಲ್ಲಾ ಸುಳ್ಳು ವಿಚಾರಣೆ ನಡೆಯಲಿ ಎಂದು ಆರೋಪಿಗಳು ಹೇಳಿಕೆ ನೀಡುವ ಸಾಧ್ಯತೆ ಇದೆ. ಇದೇ ರೀತಿ ಎಲ್ಲಾ 17 ಆರೋಪಿಗಳನ್ನ ಕರೆದು ಅವರ ಮೇಲೆ ದಾಖಲಾಗಿರೊ ಸೆಕ್ಷನ್ ಬಗ್ಗೆ ನ್ಯಾಯಾಧೀಶರು ವಿವರಣೆ ಕೇಳಲಿದ್ದಾರೆ. ಈ ಪ್ರಕ್ರಿಯೆ ಮುಗಿದ ಮೇಲೆ ದೊಷಾರೋಪ ನಿಗದಿ ಬಳಿಕ ಮುಂದೊಂದು ದಿನ ಟ್ರಯಲ್‌ಗೆ ದಿನಾಂಕ ನ್ಯಾಯಾಧೀಶರು ನಿಗದಿಪಡಿಸಲಿದ್ದಾರೆ. ಇದೇ ವೇಳೆ ಹಾಸಿಗೆ ತಲೆದಿಂಬು ನೀಡುವ ವಿಚಾರ ಕೂಡ ಚರ್ಚೆಗೆ ಬರುವ ಸಾಧ್ಯತೆ ಇದೆ. 

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !