ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಜೈಲು ಸೇರಿದ ದರ್ಶನ್ ಹಾಗೂ ಇತರರಿಗೆ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಲು ರಾಜ್ಯ ಸರ್ಕಾರ ಆದೇಶಿಸಿದೆ.
ಸಿಸಿಬಿ ಹೆಚ್ಚುವರಿ ಪೊಲೀಸ್ ಆಯುಕ್ತರಾದ ಡಾ. ಚಂದ್ರಗುಪ್ತಗೆ ಆದೇಶ ನೀಡಲಾಗಿದೆ. ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಿ ವರದಿಯನ್ನು ನೇರವಾಗಿ ಸರ್ಕಾರಕ್ಕೆ ಸಲ್ಲಿಸುವಂತೆ ಸೂಚಿಸಲಾಗಿದೆ. ಆ ಮೂಲಕ ಜೈಲಿನಲ್ಲಿ ನಡೆಯುತ್ತಿರುವ ಅಕ್ರಮಗಳ ಬಗ್ಗೆ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ.
ವಿಚಾರಣಾಧೀನ ಖೈದಿ ಆಗಿರುವ ದರ್ಶನ್ ಅವರು ಪರಪ್ಪನ ಅಗ್ರಹಾರದಲ್ಲಿ ಇರುವ ರೌಡಿಶೀಟರ್ಗಳ ಜೊತೆ ಹಾಯಾಗಿ ಕುಳಿತು ಸಿಗರೇಟ್ ಸೇದುತ್ತಾ, ಕಾಫಿ ಕುಡಿದ ಫೋಟೋ ವೈರಲ್ ಆಯಿತು. ಅಲ್ಲದೇ, ಜೈಲಿನ ಹೊರಗೆ ಇರುವ ರೌಡಿಗಳ ಜೊತೆ ವಿಡಿಯೋ ಕಾಲ್ನಲ್ಲಿ ದರ್ಶನ್ ಮಾತನಾಡಿರುವುದು ಕೂಡ ಬೆಳಕಿಗೆ ಬಂದಿದೆ.