ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………
ಹೊಸದಿಗಂತ ಆನ್ ಲೈನ್ ಡೆಸ್ಕ್:
ನಟ ದರ್ಶನ್ ಅವರ ಹೆಸರಲ್ಲಿ ನಕಲಿ ದಾಖಲೆ ಸೃಷ್ಠಿಸಿ 25 ಕೋಟಿ ರೂ. ಸಾಲ ಪಡೆದು ವಂಚನೆಗೆ ಯತ್ನ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರು ಎಸಿಪಿಗೆ ಕಚೇರಿಗೆ ದರ್ಶನ್ ಆಗಮಿಸಿ, ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಬಳಿಕ ಮಾತನಾಡಿದ ಅವರು, ಇದೊಂದು ಸಣ್ಣ ವಿಚಾರ, ಬ್ಲಾಕ್ ಮೇಲ್ ಅಲ್ಲ. ನಮ್ಮದೊಂದು ಡಾಕ್ಯುಮೆಂಟ್ ಪೋರ್ಜರಿ ಆಗಿದೆ. ಪೊಲೀಸರಿಗೆ ಮಾಹಿತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ನೀವೇ ಎಲ್ಲ ಊಹಾಪೋಹ ಮಾಡಬೇಡಿ. ಪೊಲೀಸರಿಗೆ ತನಿಖೆ ಮಾಡಲಿ. ನಾನೊಂದು ಹೇಳುವುದು, ಅದು ಬೇರೆಯಾಗಿ ತಪ್ಪಾಗುವುದು ಬೇಡ. ನಿರ್ಮಾಪಕ ಉಮಾಪತಿ ನಾವೆಲ್ಲರೂ ಚೆನ್ನಾಗಿದ್ದೇವೆ. ಕಳೆದ ತಿಂಗಳು ನಡೆದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಬಾಯಿ ಬಿಡಿಸುತ್ತಾರೆ. ನಮಗೆ ಇದೊಂದು ಮಿಲಿಯನ್ ಡಾಲರ್ ಪ್ರಶ್ನೆಯಾಗಿದೆ. ಇದರ ಹೊರತಾಗಿ ನನಗೇನೂ ಗೊತ್ತಿಲ್ಲ. ತನಿಖೆ ಬಳಿಕ ಸತ್ಯಾಂಶ ಹೊರ ಬರಲಿದೆ ಎಂದು ದರ್ಶನ್ ತಿಳಿಸಿದ್ದಾರೆ.
ನಿರ್ಮಾಪಕ ಉಮಾಪತಿ ಅವರೇ ಈ ಬಗ್ಗೆ ಬೆಂಗಳೂರು ಜಯನಗರ ಪೊಲೀಸರಿಗೆ ಮಾಹಿತಿ ನೀಡಿದ್ದು, ದರ್ಶನ್ ಸ್ನೇಹಿತರು ಕೂಡ ಮೈಸೂರು ಹೆಬ್ಬಾಳ ಪೊಲೀಸರಿಗೆ ದೂರು ನೀಡಿದ್ದಾರೆ. ದರ್ಶನ್ ಅವರಿಗೆ ಸಂಬಂಧಿಸಿದ ಆಸ್ತಿ ದಾಖಲೆ ಪೋರ್ಜರಿ ಮಾಡಲಾಗಿದೆ ಎಂದು ಹೇಳಲಾಗಿದೆ.
ಲೋನ್ ಮಾಡಿಕೊಡುವುದಾಗಿ ಹೇಳಿಕೊಂಡಿದ್ದವರ ವಿರುದ್ಧ ಪೊಲೀಸರಿಗೆ ದೂರು ನೀಡಿರುವುದಾಗಿ ನಿರ್ಮಾಪಕ ಉಮಾಪತಿ ತಿಳಿಸಿದ್ದಾರೆ. ಲೋನ್ ಬೇಕಾ ಎಂದು ಅವರೇ ಬಂದಿದ್ದರಿಂದ ವಿಚಾರಿಸಿದಾಗ ಅವರು ಬ್ಯಾಂಕ್ ಸಿಬ್ಬಂದಿ ಅಲ್ಲ ಎನ್ನುವುದು ಗೊತ್ತಾಗಿ ದೂರು ನೀಡಲಾಗಿದೆ. ದರ್ಶನ್ ಮತ್ತು ಉಮಾಪತಿ ಅವರ ಆಸ್ತಿ ನಕಲಿ ದಾಖಲೆ ಸೃಷ್ಠಿಸಲಾಗಿದೆ ಎಂದು ಹೇಳಲಾಗಿದೆ.