ಹೊಸದಿಗಂತ ಡಿಜಿಟಲ್ ಡೆಸ್ಕ್:
ಅನಾರೋಗ್ಯದಿಂದ ಹಾಸಿಗೆ ಹಿಡಿದ ಹಿರಿಯ ನಟಿ ಲೀಲಾವತಿ ನಿವಾಸಕ್ಕೆ ನಟ ದರ್ಶನ್ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.
ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯಲ್ಲಿರುವ ಲೀಲಾವತಿ ತೋಟದ ಮನೆಗೆ ದರ್ಶನ್ ಭೇಟಿ ನೀಡಿ ಹಾಸಿಗೆ ಹಿಡಿದ ನಟಿ ಲೀಲಾವತಿ ಆರೋಗ್ಯ ವಿಚಾರಿಸಿದರು.
ಕನ್ನಡ ಮಾತ್ರವಲ್ಲದೇ ಬಹುಭಾಷೆಗಳಲ್ಲಿ ಛಾಪೂ ಮೂಡಿಸಿರುವ ನಟಿ ಲೀಲಾವತಿ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿರುವ ಲೀಲಾವತಿ ನಿವಾಸಕ್ಕೆ ಇತ್ತೀಚೆಗೆ ನಟ ಧ್ರುವ ಸರ್ಜಾ ಕೂಡ ಆಗಮಿಸಿದ್ದರು.