ಹೊಸದಿಗಂತ ಡಿಜಿಟಲ್ ಡೆಸ್ಕ್:
ಹೊಸ ಜೈಲಲ್ಲಿ ಅಡ್ಜಸ್ಟ್ ಆಗೋಕೆ ಕಷ್ಟಪಡುತ್ತಿರುವ ನಟ ದರ್ಶನ್ ರಾತ್ರಿಯಿಡೀ ನಿದ್ದೆಯಿಲ್ಲದೆ ಒದ್ದಾಡಿದ್ದಾರೆ.
ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ನಟ ದರ್ಶನ್ಗೆ ರಾಜಾತಿಥ್ಯ ನೀಡಲಾಗುತ್ತಿತ್ತು. ಹೀಗಾಗಿ, ಅವರು ಹಾಯಾಗಿ ನಿದ್ದೆ ಮಾಡುತ್ತಿದ್ದರು. ಆದರೆ, ಬಳ್ಳಾರಿ ಜೈಲಿನಲ್ಲಿ ವಿಶೇಷ ಆತಿಥ್ಯಕ್ಕೆ ಬ್ರೇಕ್ ಹಾಕಲಾಗಿದೆ. ಇದು ದರ್ಶನ್ಗೆ ನುಂಗಲಾರದ ತುತ್ತಾಗಿದೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದ ನಂತರ ಬಂಧನಕ್ಕೆ ಒಳಗಾಗಿ ಹಾಯಾಗಿದ್ದ ದರ್ಶನ್ ಈಗ ನಿಜವಾದ ಸಂಕಷ್ಟ ಅನುಭವಿಸುತ್ತಿದ್ದಾರೆ. ಸದ್ಯ ಕುಟುಂಬದವರಿಗೆ ಮಾತ್ರ ಭೇಟಿಗೆ ಅವಕಾಶ ಇದೆ. ಅವರು ರಾತ್ರಿ ಇಡೀ ನಿದ್ದೆ ಇಲ್ಲದೆ ಒದ್ದಾಡಿದ್ದಾರೆ.
ಬಳ್ಳಾರಿ ಜೈಲಿನಲ್ಲಿ ದರ್ಶನ್ ಮೊದಲ ದಿನ ಕಳೆದಿದ್ದಾರೆ. ರಾತ್ರಿ 1 ಗಂಟೆವರೆಗೆ ನಿದ್ದೆ ಮಾಡದೆ ಒದ್ದಾಡಿದ್ದಾರೆ. ಜೈಲಿಗೆ ಇನ್ನೂ ಅವರು ಹೊಂದಿಕೊಂಡಿಲ್ಲ. ಜೈಲಿನಲ್ಲಿ ಬೆಳಗಿನ ಉಪಾಹಾರಕ್ಕೆ ಉಪ್ಪಿಟ್ಟು ತಿಂದಿದ್ದಾರೆ. ಅವರಿಗೆ ಜೈಲಿನ ನಿಯಮದಂತೆ 355 ಗ್ರಾಮ್ ಉಪ್ಪಿಟ್ಟು ನೀಡಲಾಗಿದೆ.