ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನ.26 ಕ್ಕೆ ಮುಂದೂಡಿದೆ.
ಕೊಲೆ ಕೇಸ್‌ನ ದರ್ಶನ್, ಪವಿತ್ರಾಗೌಡ ಸೇರಿ ಆರು ಆರೋಪಿಗಳ ಜಾಮೀನು ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ವಿಚಾರಣೆ ನಡೆಯಲಾಯಿತು. ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರು ವಿಚಾರಣೆಯನ್ನು ಮುಂದೂಡಿದ್ದಾರೆ.
ಸದ್ಯ ದರ್ಶನ್ ವೈದಕೀಯ ತುರ್ತು ಕಾರಣಕ್ಕೆ ಜಾಮೀನು ಪಡೆದು ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ಸಾಮಾನ್ಯ ಜಾಮೀನಿಗಾಗಿ ಸಲ್ಲಿಸಿದ ಅರ್ಜಿಯ ವಿಚಾರಣೆ ಮುಂದೂಡಿಕೆ ಮಾಡಲಾಗಿದೆ.