ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಜಾಮೀನು ಆದೇಶ ಹೈಕೋರ್ಟ್ ನಾಳೆಗೆ ಕಾಯ್ದಿರಿಸಿದೆ.
ಬಳ್ಳಾರಿ ಜೈಲು ಸೇರಿರುವ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆಯ ಇಂದು ಹೈಕೋರ್ಟ್ ನಲ್ಲಿ ನಡೆದಿದೆ. ನಟ ದರ್ಶನ್ ಪರ ಹಿರಿಯ ವಕೀಲ ಸಿವಿ ನಾಗೇಶ್ ವಾದ ಮಂಡಿಸಿದರು. ಆರೋಗ್ಯ ಸಮಸ್ಯೆಯನ್ನ ಮುಂದಿಟ್ಟುಕೊಂಡು ವಕೀಲರು ವಾದ ಮಂಡಿಸಿದ್ದಾರೆ. ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್ ಆದೇಶವನ್ನು ನಾಳೆಗೆ ಕಾಯ್ದಿರಿಸಿದೆ. ದರ್ಶನ್ ಜಾಮೀನು ಭವಿಷ್ಯ ಬುಧವಾರ ನಿರ್ಧಾರ ಆಗಲಿದೆ.