ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ ದರ್ಶನ್ ಕೇಸ್ ಬಗ್ಗೆ ಸುಪ್ರಿಂ ಕೋರ್ಟ್‌ನಲ್ಲಿ ವಿಚಾರಣೆ ಆಗಿ ಸುದ್ದಿ ಹೊರಬರುತ್ತಿದ್ದಂತೆ ನಟಿ ರಮ್ಯಾ ಅವರು ಅದನ್ನು ಸ್ವಾಗತಿಸಿದ್ದಾರೆ. ಈ ಮೊದಲು ಕೂಡ ನಟಿ ರಮ್ಯಾ ಅವರು ನಟ ದರ್ಶನ್ ಅವರಿಗೆ ಶಿಕ್ಷೆ ಆಗಬೇಕು, ಕಠಿಣ ಶಿಕ್ಷೆ ಆಗಬೇಕು ಎಂದು ಆಗ್ರಹಿಸಿದ್ದರು. ಈಗ ಕೂಡ ಅದೇ ಧಾಟಿಯಲ್ಲಿ ರಮ್ಯಾ ಮಾತನಾಡಿದ್ದಾರೆ.
ಸುಪ್ರೀಂ ಕೋರ್ಟ್‌ನಲ್ಲಿ ಗುರುವಾರ ನಡೆದ ವಿಚಾರಣೆಯನ್ನ ನೋಡಿ, ನಟಿ ರಮ್ಯಾ ಸೋಷಿಯಲ್ ಮಿಡಿಯಾದಲ್ಲಿ ಪೋಸ್ಟ್ ಮಾಡಿದ್ದು, ‘ಸುಪ್ರೀಂ ಕೋರ್ಟ್ ಭಾರತದ ಸಾಮಾನ್ಯ ಜನರ ಪಾಲಿಗೆ ಆಶಾಕಿರಣ. ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುವ ಭರವಸೆ ಇದೆ ಅಂತ ಬರೆದುಕೊಂಡಿದ್ದಾರೆ. ಇದೀಗ ನಟಿ ರಮ್ಯಾ ಅವರ ಈ ಪೋಸ್ಟ್ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.
ನಟ ದರ್ಶನ್ ಸೇರಿ ಏಳು ಆರೋಪಿಗಳಿಗೆ ಹೈಕೋರ್ಟ್ ನೀಡಿದ ಜಾಮೀನು ಆದೇಶದ ಕುರಿತು ಸುಪ್ರೀಂ ಕೋರ್ಟ್ ಗಂಭೀರ ಆಕ್ಷೇಪ ವ್ಯಕ್ತಪಡಿಸಿದೆ. ಸಾಕ್ಷ್ಯಾಧಾರಗಳಿಗಿಂತ ಹೆಚ್ಚು ವಿಮರ್ಶೆ ಇಲ್ಲದೆ ಜಾಮೀನು ನೀಡಿರುವ ಹೈಕೋರ್ಟ್ ತೀರ್ಪು ಸರಿಯಲ್ಲ ಎಂದು ಸುಪ್ರೀಂ ಕೋರ್ಟ್‌ನ ಪರ್ದಿವಾಲಾ ಪೀಠ ತಿಳಿಸಿದೆ. ಸಾಕ್ಷ್ಯಾಧಾರಗಳ ಲಭ್ಯತೆ ಇದ್ದರೂ ಅದನ್ನು ಗಂಭೀರವಾಗಿ ಪರಿಗಣಿಸದೇ ಜಾಮೀನು ನೀಡಲಾಗಿದೆ ಎಂಬಾರ್ಥದಲ್ಲಿ ಹೈಕೋರ್ಟ್ ಜಾಮೀನು ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿಕಾರಿದೆ.